ADVERTISEMENT

ರಾಜ್ಯದಲ್ಲಿ ಉತ್ತಮ ಆಡಳಿತ: ಶಿವಾನಂದ ಪಾಟೀಲ

ಕೆಪಿಸಿಸಿ ಪ್ರಚಾರ ಸಮಿತಿ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2025, 5:12 IST
Last Updated 30 ನವೆಂಬರ್ 2025, 5:12 IST
ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಅವರು ಕೆಪಿಸಿಸಿ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಿಸಿದರು
ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಅವರು ಕೆಪಿಸಿಸಿ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಿಸಿದರು   

ವಿಜಯಪುರ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದಲ್ಲಿ ಅತ್ಯುತ್ತಮವಾಗಿ ಆಡಳಿತ ನಡೆಸುತ್ತಿದೆ. ಹೀಗಾ ಸರಕಾರದ ಯೋಜನೆಗಳ ಕುರಿತು ಜನತೆಗೆ ಮನವರಿಕೆ ಮಾಡಿಕೊಡುವಲ್ಲಿ ಪಕ್ಷದ ಪ್ರಚಾರ ಸಮಿತಿ ಕೆಲಸ ಮಾಡಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ‌ ಸಚಿವರಾದ ಶಿವಾನಂದ ಪಾಟೀಲ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ವಿಜಯಪುರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.

ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಹತ್ತಾರು ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿದ್ದು, ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಆಗಿರುವ ಅನುಕೂಲಗಳ ಬಗ್ಗೆ ತಿಳಿಸಿ ಹೇಳುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಭವಿಷ್ಯದಲ್ಲಿ ಎದುರಾಗುವ ಯಾವುದೇ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವಂತೆ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಪ್ರಚಾರ ಸಮಿತಿ ಜವಾಬ್ದಾರಿ ನಿಭಾಯಿಸಬೇಕು ಎಂದರು.

ADVERTISEMENT

ಕಬ್ಬು ಬೆಳೆಗಾರರ ಜಟಿಲವಾಗಿದ್ದ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿ ರೈತರ ಪರವಾಗಿ ಕೆಲಸ ಮಾಡಿದೆ ಎಂದರು‌.

ಪ್ರಚಾರ ಸಮಿತಿಗೆ ನೇಮಕವಾಗಿರುವ ಪ್ರತಿಯೊಬ್ಬರೂ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಬದ್ಧತೆಯಿಂದ ಶ್ರಮಿಸಬೇಕು. ಪಕ್ಷದ ಕಾರ್ಯಕರ್ತರಿಗೆ ಏನೇ ಸಹಾಯ ಸಹಕಾರ ಅಗತ್ಯವಿದ್ದ ನೀಡಲು ಸಿದ್ಧ ಎಂದರು.

ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಯುಕ್ತ ಪಾಟೀಲ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಬ್ಲಾಕ್, ಪಂಚಾಯತ್ ಮಟ್ಟದಲ್ಲಿ ಪ್ರಚಾರ ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಸಮಿತಿಗಳು ಸೇರಿದಂತೆ ಪಕ್ಷದ ಸಾಮಾನ್ಯ ಕಾರ್ಯಕರ್ತರೆಲ್ಲ ಸೇರಿ ಸರ್ಕಾರದ ಮಹತ್ತರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಮುಂಬರುವ ಪುರಸಭೆ, ತಾಲ್ಲೂಕು  ಹಾಗೂ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಸ್ಪರ್ಧಿಗಳು ಗೆಲ್ಲುವಂತೆ ಶ್ರಮಿಸಬೇಕು ಎಂದರು.

ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಸರ್ಫರಾಜ ಮಿರ್ದೆ, ಬಸವನಬಾಗೇವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಕಾಂಗ್ರೆಸ್ ಪ್ರಚಾರ ಸಮಿತಿ ಬಸವನಬಾಗೇವಾಡಿ ಬ್ಲಾಕ್ ಅಧ್ಯಕ್ಷ ಶಂಕರಗೌಡ ಬಿರಾದಾರ, ನಗರ ಘಟಕದ ಅಧ್ಯಕ್ಷ ಸುರೇಶ ಪಾಟೀಲ, ಪ್ರಚಾರ ಸಮಿತಿ ಬ್ಲಾಕ್ ಉಪಾಧ್ಯಕ್ಷ ದ್ಯಾವನಗೌಡ ಪಾಟೀಲ, ಭಾಗ್ಯರಾಜ ಸೊನ್ನದ, ಪ್ರದೀಪ ಜಾನಕರ, ಪ್ರೇಮಕುಮಾರ ಮ್ಯಾಗೇರಿ, ಮಹ್ಮದ ಇಬ್ರಾಹೀಮ ಮಕಾಂದಾರ, ರಾಜೇಶ ಹೆಬ್ಬಾಳ, ಪ್ರವೀಣ ಪೂಜಾರಿ, ಹಣಮಂತ ಅಡಗಿಮನಿ, ರವಿ ನಾಯ್ಕೋಡಿ ಉಪಸ್ಥಿತರಿದ್ದರು

ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳು ಬಡ ಜನರ ಬಾಳಿಗೆ ಆಶಾ ಕಿರಣವಾಗಿವೆ.  ಸರ್ಕಾರದ ಅನೇಕ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಮುಟ್ಟಿಸುವ ಕಾರ್ಯವಾಗಬೇಕು
ಶಿವಾನಂದ ಪಾಟೀಲ ಸಚಿವ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.