ADVERTISEMENT

ಮೋದಿಯಿಂದ ಉತ್ತಮ ಆಡಳಿತ; ಪೇಜಾವರ ಶ್ರೀ

​ಪ್ರಜಾವಾಣಿ ವಾರ್ತೆ
Published 12 ಜುಲೈ 2018, 12:41 IST
Last Updated 12 ಜುಲೈ 2018, 12:41 IST

ವಿಜಯಪುರ: ‘ಪ್ರಧಾನಿ ನರೇಂದ್ರ ಮೋದಿ ಉತ್ತಮ ಆಡಳಿತ ನೀಡಿದ್ದಾರೆ’ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ತಿಳಿಸಿದರು.

‘ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ಆರ್ಥಿಕ ಸ್ಥಿತಿಯನ್ನು ಬಲಾಢ್ಯಗೊಳಿಸಿದ್ದಾರೆ’ ಎಂದು ನಗರದಲ್ಲಿ ಗುರುವಾರ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

‘ಮುಂದಿನ ಬಾರಿ ಮತ್ತೊಮ್ಮೆ ಮೋದಿ ಆಡಳಿತ ದೇಶದಲ್ಲಿ ಅಸ್ತಿತ್ವಕ್ಕೆ ಬರುತ್ತದೆಯೋ ? ಇಲ್ಲವೋ ಎಂಬ ರಾಜಕಾರಣದ ಮಾತುಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ’ ಎಂದು ಇದೇ ಸಂದರ್ಭ ಹೇಳಿದರು.

ADVERTISEMENT

‘ಈಚೆಗೆ ರಾಜಕಾರಣದ ಬಗ್ಗೆ ತುಂಬಾ ಬೇಸರವಾಗಿದೆ. ಜನರಲ್ಲೂ ಈ ಭಾವನೆ ಹೆಚ್ಚುತ್ತಿದೆ. ಇದನ್ನು ತಪ್ಪಿಸಲು ಸರ್ವಪಕ್ಷೀಯ ಸರ್ಕಾರ ಅಸ್ತಿತ್ವಕ್ಕೆ ಬರುವುದೊಂದೇ ಪರ್ಯಾಯವಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.