ADVERTISEMENT

ಸಂಡೇ ಲಾಕ್‌ಡೌನ್‌ | ಗುಮ್ಮಟ ನಗರಿ ಸಂಪೂರ್ಣ ಸ್ತಬ್ಧ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 6:31 IST
Last Updated 12 ಜುಲೈ 2020, 6:31 IST
ವಿಜಯಪುರ ನಗರದ ಮುಖ್ಯರಸ್ತೆಗಳು ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ರಸ್ತೆಗಳು
ವಿಜಯಪುರ ನಗರದ ಮುಖ್ಯರಸ್ತೆಗಳು ವಾಹನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ರಸ್ತೆಗಳು    
""

ವಿಜಯಪುರ: ಕೋವಿಡ್ ಹಿನ್ನೆಲೆಯಲ್ಲಿ ಭಾನುವಾರದ ಲಾಕ್‌ಡೌನ್‌ಗೆಗುಮ್ಮಟ ನಗರಿ ಸಂಪೂರ್ಣ ಸ್ತಬ್ಧವಾಗಿದೆ. ಬಸ್ ನಿಲ್ದಾಣ, ಮಾರುಕಟ್ಟೆ, ಮುಖ್ಯ ರಸ್ತೆ ಗಳು ಜನ, ವಾಹನಗಳ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿವೆ.

ಎಲ್ಲ ಅಂಗಡಿ, ಮುಂಗಟ್ಟು, ವಾಣಿಜ್ಯ ಮಳಿಗೆಗಳು ಬಾಗಿಲು ಬಂದ್ ಆಗಿವೆ. ಬಸ್, ಆಟೊ ಸೇರಿದಂತೆ ಜನ, ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿವೆ. ಆಸ್ಪತ್ರೆ, ಔಷಧ ಅಂಗಡಿ, ಕೋಳಿ, ಕುರಿ ಮಾಂಸ, ಹಾಲು ಮಾರಾಟ ಮಳಿಗೆಗಳು ಮಾತ್ರ ಬಾಗಿಲು ತೆರೆದಿರುವುದು ಕಂಡು ಬಂದಿತು.

ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕುವ ಮೂಲಕ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ಬೈಕ್, ಕಾರುಗಳಲ್ಲಿ ಅಡ್ಡಾಡುವವರನ್ನು ಪೊಲೀಸರು ತಡೆದು, ವಿಚಾರಣೆ ಮಾಡಿದ ಬಳಿಕ ತುರ್ತು ಇದ್ದವರಿಗೆ ಮಾತ್ರ ಸಂಚರಿಸಲು ಬಿಡುತ್ತಿದ್ದಾರೆ.

ADVERTISEMENT

ಕೆಲವೆಡೆ ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಬೆತ್ತದ ರುಚಿ ತೋರಿಸಿದರು. ಬಹುತೇಕ ಜನರು ಮನೆಯಲ್ಲೇ ಇರುವ ಮೂಲಕ ಲಾಕ್‌ಡೌನ್‌ಗೆ ಸ್ವಯಂ ಪ್ರೇರಿತ ಬೆಂಬಲ ವ್ಯಕ್ತಪಡಿಸಿದ್ದಾರೆ.

ವಿಜಯಪುರರಸ್ತೆಯಲ್ಲಿಅನಗತ್ಯವಾಗಿತಿರುಗಾಡುತ್ತಿದ್ದ ಜನರಿಗೆ ಪೊಲೀಸರು ಲಾಠಿ ಪೆಟ್ಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.