ವಿಜಯಪುರ: ಜಿಲ್ಲೆಯಾದ್ಯಂತ ಶನಿವಾರ ಸಂಜೆಯಿಂದ ಆರಂಭವಾಗಿರುವ ಮಳೆ ರಾತ್ರಿಯಿಡೀ ಬಿಡದೆ ಸುರಿಯುತ್ತಿದೆ.
ವಿಜಯಪುರ ನಗರ ಸೇರಿದಂತೆ ಇಂಡಿ, ಸಿಂದಗಿ, ತಾಳಿಕೋಟೆ, ಮುದ್ದೇಬಿಹಾಳ, ಬಸವನ ಬಾಗೇವಾಡಿ, ಆಲಮಟ್ಟಿ, ಕೊಲ್ಹಾರ, ಬಬಲೇಶ್ವರ, ತಿಕೋಟಾ ಪಟ್ಟಣ ವ್ಯಾಪ್ತಿಯಲ್ಲಿ ಒಂದೇ ಸಮನೆ ಮಳೆ ಸುರಿಯುತ್ತಿದೆ.
ಜೂನ್ ಆರಂಭದಲ್ಲಿ ಅಬ್ಬರಿಸಿದ್ದ ವರುಣ ಎರಡು ವಾರಗಳಿಂದ ಬಿಡುವು ನೀಡಿತ್ತು.
ಮಳೆ ಕಡಿಮೆಯಾದ ಪರಿಣಾಮ ಬಿತ್ತನೆಗೆ ಹಿನ್ನಡೆಯಾಗಿತ್ತು. ಇದೀಗ ಹದ ಮಳೆಯಾಗುರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ.
ಈಗಾಗಲೇ ಸಜ್ಜುಗೊಳಿಸಿರುವ ಹೊಲಗಳಲ್ಲಿ ತೊಗರಿ, ಮೆಕ್ಕೆಜೋಳ, ಸೂರ್ಯಕಾಂತಿ ಬಿತ್ತನೆ ಕಾರ್ಯ ಚುರುಕು ಪಡೆದಿದೆ. ಜೂನ್ ಎರಡು ಮತ್ತು ಮೂರನೇ ವಾರದಲ್ಲಿ ಮಳೆ ಕೊರತೆಯಾಗಿದ್ದ ಪರಿಣಾಮ ನಿರೀಕ್ಷಿತ ಪ್ರಮಾಣದಲ್ಲಿ ಹೆಸರು ಬಿತ್ತನೆಯಾಗಿಲ್ಲ.
ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗಿರುವ ಪರಿಣಾಮ ಆಲಮಟ್ಟಿ ಜಲಾಶಯಕ್ಕೆ ಜೂನ್ ತಿಂಗಳಿನಲ್ಲಿ ನಿರೀಕ್ಷೆ ಮೀರಿ ನೀರು ಹರಿದುಬಂದಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.