
ವಿಜಯಪುರ: ‘ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದ್ದು, ಮುಂದಿನ ಎರಡ್ಮೂರು ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮದ ಸಹಯೋಗದಲ್ಲಿ ಆಲಮಟ್ಟಿಯಲ್ಲಿ ನಿರ್ಮಿಸಲಾಗಿರುವ ಜಲ ಮನೋರಂಜನಾ ಉದ್ಯಾನವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಆಲಮಟ್ಟಿ ಅಣೆಕಟ್ಟೆಯ ಎತ್ತರವವನ್ನು 524 ಮೀಟರ್‌ಗೆ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ಇದರಿಂದ 75 ಸಾವಿರ ಎಕರೆ ಭೂಮಿ ಮುಳುಗಡೆಯಾಗಲಿದ್ದು, 20 ಗ್ರಾಮಗಳನ್ನು ಸ್ಥಳಾಂತರ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.
‘ಅಣೆಕಟ್ಟೆಯ ಎತ್ತರ ಹೆಚ್ಚಿಸಿದರೆ, 233 ಟಿಎಂಸಿ ಅಡಿ ನೀರು ಸಂಗ್ರಹಿಸಬಹುದು. ಅಲ್ಲದೆ, 6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ಸಿಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.