ADVERTISEMENT

ಸಹಕಾರ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ: ಅಣ್ಣಾಸಾಹೇಬ ಜೊಲ್ಲೆ

ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ: ಅಣ್ಣಾಸಾಹೇಬ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 3:05 IST
Last Updated 20 ಫೆಬ್ರುವರಿ 2026, 3:05 IST
ವಿಜಯಪುರದಲ್ಲಿ ನಡೆದ ಜಿಲ್ಲಾ ಸೌಹಾರ್ದ ಸಹಕಾರಿಗಳ ಪ್ರಥಮ ಸಮಾವೇಶವನ್ನು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಉದ್ಘಾಟಿಸಿದರು 
ವಿಜಯಪುರದಲ್ಲಿ ನಡೆದ ಜಿಲ್ಲಾ ಸೌಹಾರ್ದ ಸಹಕಾರಿಗಳ ಪ್ರಥಮ ಸಮಾವೇಶವನ್ನು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಉದ್ಘಾಟಿಸಿದರು    

ವಿಜಯಪುರ: ‘ಸಹಕಾರ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲ’ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಭಾವಸಾರ ಸಾಂಸ್ಕೃತಿಕ ಭವನದಲ್ಲಿ ಬುಧವಾರ ನಡೆದ ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

‘ಸಹಕಾರ ಸಂಘಗಳು ದೇಶವ್ಯಾಪಿ ಬೆಳೆಯಬೇಕು, ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಒದಗಿಸಬೇಕು’ ಎಂದರು.

ADVERTISEMENT

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ನಂಜೇಗೌಡ ಮಾತನಾಡಿ, ‘ಸಹಕಾರಿಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಹಕಾರಿ ಸಂಘಗಳು, ದೇಶದ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸುತ್ತಿವೆ’ ಎಂದು ತಿಳಿಸಿದರು.

ಹಿರಿಯ ಮಾರ್ಗದರ್ಶಕರಾದ ಅರವಿಂದ ದೇಶಪಾಂಡೆ, ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷ ಸಂಜಯ ಪಾಟೀಲ ಕನಮಡಿ, ಉಪಾಧ್ಯಕ್ಷ ಚಂದ್ರಶೇಖರ ಕವಟಗಿ ಮಾತನಾಡಿದರು. ಸಹಕಾರ ರತ್ನ ಪುರಸ್ಕೃತ ಶಂಕರಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಷಣ್ಮುಖಾರೂಡ ಮಠ ವಿಜಯಪುರ ಮತ್ತು ಹುಬ್ಬಳಿಯ ಶಾಂತಾಶ್ರಮದ ಅಭಿನವ ಸಿದ್ಧಾರೂಢ ಸ್ವಾಮೀಜಿ, ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ಪ್ರಭುದೇವ ಮ್ಯಾಗ್ನೂರ, ರಾಷ್ಟ್ರೀಯ ಸಂಯೋಜಕರಾದ ರಮೇಶ ವೈದ್ಯ ಜಿ, ಹಿರಿಯರಾದ ಸಿದ್ರಾಮಪ್ಪ ಉಪ್ಪಿನ, ಎಂ.ಜಿ.ಪಾಟೀಲ ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರಾದ ಅರುಣ ವಾರದ, ಸುರೇಶ ಬಿರಾದಾರ, ಅರುಣ ಮಠ, ಸಿದ್ದು ಮಲ್ಲಿಕಾರ್ಜುನಮಠ, ಆರ್ .ಡಿ. ಕುಲಕರ್ಣಿ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.