
ವಿಜಯಪುರ: ‘ರಾಜ್ಯದಲ್ಲಿ 2.73 ಲಕ್ಷ ಹುದ್ದೆಗಳು ಖಾಲಿ ಇದ್ದು, ಲಕ್ಷಾಂತರ ನಿರುದ್ಯೋಗಿಗಳು ಉದ್ಯೋಗ ನೇಮಕಾತಿಗೆ ಪ್ರಕ್ರಿಯೆ ಎದುರು ನೋಡುತ್ತಿದ್ದಾರೆ. ಆದರೆ, ಈ ವಿಷಯದಲ್ಲಿ ಸರ್ಕಾರ ಯಾವ ಗಂಭೀರ ಹೆಜ್ಜೆಯನ್ನೂ ಇಡುತ್ತಿಲ್ಲ’ ಎಂದು ಎಸ್‌ಬಿಎಂ ವಿಸ್ಡಂ ಅಕಾಡೆಮಿಯ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಬೇಸರ ವ್ಯಕ್ತಪಡಿಸಿದ್ದಾರೆ.
‘ರಾಜ್ಯದಲ್ಲಿ ಉದ್ಯೋಗ ಭರ್ತಿಗಾಗಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಆದರೆ, ನ್ಯಾಯಯುತ ಬೇಡಿಕೆ ಈಡೇರಿಸಬೇಕಾದ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಉದ್ಯೋಗ ಒದಗಿಸುವ ಭರವಸೆ ಈಡೇರಿಸದ ಕಾರಣ ಉದ್ಯೋಗಾಕಾಂಕ್ಷಿಗಳು ತೊಂದರೆಗೆ ಸಿಲುಕಿದ್ದಾರೆ’ ಎಂದು ಹೇಳಿದ್ದಾರೆ.
‘ರಾಜ್ಯದ ಶಿಕ್ಷಣ ಇಲಾಖೆಯಲ್ಲಿ 69,800, ಆರೋಗ್ಯ ಇಲಾಖೆಯಲ್ಲಿ 34,908, ಗೃಹ ಇಲಾಖೆಯಲ್ಲಿ 23,580 ಹುದ್ದೆಗಳು ಖಾಲಿ ಇವೆ. ಇದರಿಂದ ಆಡಳಿತ ಯಂತ್ರವೂ ಸೂಸೂತ್ರವಾಗಿ ನಡೆಯದೆ, ಜನಸಾಮಾನ್ಯರ ಕೆಲಸ ವಿಳಂಬವಾಗುತ್ತಿದೆ. ಸರ್ಕಾರ ಕಾಲಹರಣ ಮಾಡದೆ, ಉದ್ಯೋಗ ಭರ್ತಿಗೆ ಆದ್ಯತೆ ನೀಡಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.