
ಪ್ರಜಾವಾಣಿ ವಾರ್ತೆ
ವಿಜಯಪುರ: ‘ಸರ್ಕಾರ ಯಾರ ಹಿತಕ್ಕಾಗಿ ಪಿಪಿಪಿ ಮಾದರಿಯನ್ನು ಜಿಲ್ಲೆಯ ಜನರ ಮೇಲೆ ಹೇರುತ್ತಿದ್ದಾರೆ ಅರ್ಥವಾಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಎಂ.ಬಿ.ಪಾಟೀಲ್ ಅವರು ಆದಷ್ಟು ಬೇಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಆದ್ಯತೆ ನೀಡಬೇಕು’ ಎಂದು ಕೆಜಿಎಫ್‌ನ ಕನ್ನಡಪರ ಹೋರಾಟಗಾರ ಅಶೋಕ ಲೋಣಿ ಹೇಳಿದರು.
101ನೇ ದಿನ ಪೂರೈಸಿದ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟದಲ್ಲಿ ಶನಿವಾರ ಪಾಲ್ಗೊಂಡು ಅವರು ಮಾತನಾಡಿದರು.
ವಿಜಯಪುರ ಅಂಗವಿಕಲರ ಸಂಘದ ಪದಾಧಿಕಾರಿಗಳು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ವೇದಿಕೆಗೆ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿದರು.
ಹೋರಾಟ ಸಮಿತಿ ಸದಸ್ಯರು ಇದ್ದರು.