ADVERTISEMENT

‘ಕುಂದು ಕೊರತೆ; ತಕ್ಷಣ ಸ್ಪಂದನೆ’

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 14:18 IST
Last Updated 9 ಸೆಪ್ಟೆಂಬರ್ 2019, 14:18 IST
ವಿಜಯಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಬಸವರಾಜ ಯಲಿಗಾರ ಅಧ್ಯಕ್ಷತೆಯಲ್ಲಿ ಈಚೆಗೆ ಸಭೆ ಜರುಗಿತು
ವಿಜಯಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಬಸವರಾಜ ಯಲಿಗಾರ ಅಧ್ಯಕ್ಷತೆಯಲ್ಲಿ ಈಚೆಗೆ ಸಭೆ ಜರುಗಿತು   

ವಿಜಯಪುರ: ‘ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಒಂದು ಅಥವಾ ಎರಡು ದಿನಗಳಲ್ಲಿ ಇತ್ಯರ್ಥವಾಗುವಂತಹ ಸಾರ್ವಜನಿಕರ ಕುಂದು ಕೊರೆತೆಗಳನ್ನು ಆಲಿಸಿ ಅವುಗಳಿಗೆ ತಕ್ಕ ಮಟ್ಟಿಗೆ ಪರಿಹಾರ ಒದಗಿಸುವ ಕಾರ್ಯ ಮಾಡಲಾಗುವುದು’ ಎಂದು ಕರ್ನಾಟಕ ಲೋಕಾಯುಕ್ತ ಡಿವೈಎಸ್‌ಪಿ ಬಸವರಾಜ ಯಲಿಗಾರ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಈಚೆಗೆ ನಡೆದ ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಪ್ರತಿ ತಾಲ್ಲೂಕಿನ ಗ್ರಾಮಾಂತರ ಮಟ್ಟದ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಮತ್ತು ಅಹವಾಲು ಸ್ವೀಕರಿಸಿದ ತಕ್ಷಣ ಅವರಿಗೆ ನೆರವಾಗಬೇಕು’ ಎಂದು ಹೇಳಿದರು.

ADVERTISEMENT

ಹೊನವಾಡ ಗ್ರಾಮದ ಸಾರ್ವಜನಿಕರು ಬೀದಿದೀಪ, ಗ್ರಾಮದ ಸ್ವಚ್ಛತೆಗೆ ಕಸದ ತೊಟ್ಟಿಗಳನ್ನು ನಿರ್ಮಿಸಲು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಸವರಾಜ ಅವರು, ಸೂಕ್ತ ಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2009ರ ಅಕ್ರಮ-ಸಕ್ರಮದ ಯೋಜನೆಯಲ್ಲಿ ರೈತರಿಗೆ ಪಂಪ್‌ಸೆಟ್, ಟಿಸಿ ಸಕ್ರಮ ಮಾಡುವ ಅಹವಾಲನ್ನು ಆಲಿಸಿ, ಆ ರೈತರ ಸಮ್ಮುದಲ್ಲಿ ಹೆಸ್ಕಾಂ ಅಧಿಕಾರಿಗಳೊಂದಿಗೆ ಮಾತನಾಡಿ ಶೀಘ್ರದಲ್ಲಿ ಪರಿಹಾರ ಒದಗಿಸುವ ಭರವಸೆ ನೀಡಿದರು.

ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಸ್.ರಾಠೋಡ, ಆರ್‌ಟಿಒ ಬಿ.ಆರ್.ಮಂಜುನಾಥ, ಅಬಕಾರಿ ಇನ್‌ಸ್ಪೆಕ್ಟರ್ ಎ.ಬಿ.ಬೆಳ್ಳುಬ್ಬಿ, ಸರ್ವೆ ಮೇಲ್ವಿಚಾರಕ ಬಿ.ಜೆ.ಮುಳಗೊಂಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಂ.ಹುರಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.