ADVERTISEMENT

ಕೋವಿಡ್ ತಡೆಗೆ ಜಿಲ್ಲೆಯಲ್ಲಿ ಮಾರ್ಗಸೂಚಿ ಜಾರಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 16:18 IST
Last Updated 1 ಡಿಸೆಂಬರ್ 2021, 16:18 IST
ಪಿ.ಸುನೀಲ್‌ಕುಮಾರ್
ಪಿ.ಸುನೀಲ್‌ಕುಮಾರ್   

ವಿಜಯಪುರ: ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ಹೆಚ್ಚಾಗುತ್ತಿದ್ದು, ಈ ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲೂ ವಿವಿಧ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.

ನೆರೆಯ ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರಯಾಣಿಕರು, ಸಾರ್ವಜನಿಕರ ಮೇಲೆ ವಿಶೇಷ ಕಣ್ಗಾವಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ರೈಲು, ಬಸ್, ಟ್ಯಾಕ್ಸಿ, ಖಾಸಗಿ ವಾಹನಗಳ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಆರ್ ಟಿ ಪಿ ಸಿ ಆರ್ ನೆಗೆಟಿವ್ ಪರೀಕ್ಷೆಯ ವರದಿಯನ್ನು ಹೊಂದಿರಬೇಕು.

ADVERTISEMENT

ರೈಲ್ವೆ ಪ್ರಾಧಿಕಾರವು ರೈಲಿನಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರು ಆರ್ ಟಿ ಪಿ ಸಿ ಆರ್ ನೆಗೆಟಿವ್ ಪರೀಕ್ಷೆಯ ವರದಿ ಹೊಂದಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಬಸ್ ಮೂಲಕ ಪ್ರಯಾಣಿಸುವವರು ಆರ್ ಟಿ ಪಿ ಸಿ ಆರ್ ನೆಗೆಟಿವ್ ಪರೀಕ್ಷೆಯ ವರದಿ ಹೊಂದಿರುವುದನ್ನು ಆಯಾ ಬಸ್ ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.

ವಿಜಯಪುರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಖಾಸಗಿ ಹಾಗೂ ಸ್ವಂತ ವಾಹನ ಇತ್ಯಾದಿಗಳ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್ ಟಿ ಪಿ ಸಿ ಆರ್ ನೆಗೆಟಿವ್ ಪರೀಕ್ಷೆಯ ವರದಿ ಪರಿಶೀಲಿಸುವ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ತಿಳಿಸಿದ್ದಾರೆ.

ಈ ಕಾರ್ಯದಲ್ಲಿ ನಿರ್ಲಕ್ಷ, ಬೇಜವಾಬ್ದಾರಿ ತೋರಿದ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.