ADVERTISEMENT

ನ. 13ಕ್ಕೆ ‘ಗೈಡಿಂಗ್ ಫೋರ್ಸ್’: ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್‌’ ಸಹಯೋಗ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 5:29 IST
Last Updated 11 ನವೆಂಬರ್ 2025, 5:29 IST
ಡಾ.ಆನಂದ್‌ ಕೆ.
ಡಾ.ಆನಂದ್‌ ಕೆ.   

ವಿಜಯಪುರ: ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ವಿವಿಧ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು ಎಂಬ ಹೆಬ್ಬಯಕೆ ಹೊಂದಿರುವವರಿಗೆ ವಿಷಯತಜ್ಞರು ಹಾಗೂ ಸಾಧಕರಿಂದ ಮಾರ್ಗದರ್ಶನ ನೀಡಲು ನವೆಂಬರ್‌ 13ರಂದು ಬೆಳಿಗ್ಗೆ 10ಕ್ಕೆ ‘ಗೈಡಿಂಗ್ ಫೋರ್ಸ್’ ಕಾರ್ಯಕ್ರಮ ಆಯೋಜಿಸಲಾಗಿದೆ.

‘ಪ್ರಜಾವಾಣಿ’, ಡೆಕ್ಕನ್ ಹೆರಾಲ್ಡ್‌’ ಪತ್ರಿಕೆಗಳ ಸಹಯೋಗದಲ್ಲಿ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ‘ಇನ್‌ಸೈಟ್ಸ್‌ ಐಎಎಸ್‌’ ಸಂಸ್ಥೆಯ ಸಹಯೋಗವಿದೆ.

ಜಿಲ್ಲಾಧಿಕಾರಿ ಡಾ.ಆನಂದ್‌ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ತಮ್ಮ ಯಶಸ್ಸಿನ ಗುಟ್ಟು ತಿಳಿಸಿಕೊಡಲಿದ್ದಾರೆ ಮತ್ತು ತಮ್ಮ ಸಾಧನೆಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ADVERTISEMENT

ಇನ್‌ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಹಾಗೂ ನಿರ್ದೇಶಕರೂ ಆಗಿರುವ ಜಿ.ಬಿ.ವಿನಯ್‌ ಕುಮಾರ್ ಸ್ಪರ್ಧಾತ್ಮಕ ಪರೀಕ್ಷೆಗಳ ಯಶಸ್ಸಿಗೆ ಅಗತ್ಯ ಮಾರ್ಗದರ್ಶನ ಮಾಡಲಿದ್ದಾರೆ. ವಿಷಯ ತಜ್ಞರು ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗಳು ಹಾಗೂ ಸಾಧನೆಗೆ ಬೇಕಾದ ಮಾಹಿತಿ ನೀಡಲಿದ್ದಾರೆ.

ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಕ್ರಮ ರೂಪಿಸಲಾಗಿದೆ. ಅಂದು ಬೆಳಿಗ್ಗೆ 9ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.

ಎಲ್ಲರಿಗೂ ಉಚಿತ ಪ್ರವೇಶವಿದೆ. ನೋಂದಣಿ ಬಗ್ಗೆ ಮಾಹಿತಿಗಾಗಿ ಶ್ರೀಶೈಲ ಬಿದರಿ: ಮೊ.9742392333, ರವಿ ಹೆಗಡೆ: 9742962303 ಅವರನ್ನು ಸಂಪರ್ಕಿಸಬಹುದು.

ರಿಷಿ ಆನಂದ್‌
ಲಕ್ಷ್ಮಣ ನಿಂಬರಗಿ
ವಿನಯಕುಮಾರ್‌ ಜಿ.ಬಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.