
ವಿಜಯಪುರ: ‘ನಾನು ಮತ್ತೆ ಮುಖ್ಯಮಂತ್ರಿ ಆಗುವುದು ಮುಖ್ಯವಲ್ಲ. ಕನ್ನಡಿಗರ ಬದುಕು ಸರಿಪಡಿಸುವ ಸರ್ಕಾರ ರಚನೆಗೆ ಜನತೆ ಆಶೀರ್ವಾದ ಮಾಡಬೇಕು’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಜನತಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ₹ 7.65 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಮತ್ತೆ ₹1 ಲಕ್ಷ ಕೋಟಿ ಸಾಲ ಮಾಡಲು ಹೊರಟಿದ್ದಾರೆ. ಈ ಸಾಲ ತೀರಿಸುವವರು ಯಾರು. ಇದನ್ನು ನಮ್ಮ ಜನರೇ ತೀರಿಸಬೇಕಾಗುತ್ತದೆ’ ಎಂದರು.
‘ಕಾಂಗ್ರೆಸ್ ಕೊಡುವ ₹ 2 ಸಾವಿರಕ್ಕೆ ಮಹಿಳೆಯರು ಮರುಳಾಗಬೇಡಿ, ಅಬಕಾರಿ ತೆರಿಗೆ, ವಿದ್ಯುತ್ ದರ ಏರಿಕೆ ಮಾಡಿದ್ದಾರೆ, ₹ 2 ಸಾವಿರವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದ್ದಾರೆ’ ಎಂದು ದೂರಿದರು.
‘ಗ್ಯಾರಂಟಿ ಯೋಜನೆ ಈಗ ಸರ್ಕಾರಕ್ಕೆ ಭಾರ ಎನಿಸಿದೆ. ಹೀಗಾಗಿ ಅನುಕೂಲಸ್ತ ಬಿಟ್ಟುಕೊಡಿ ಎನ್ನುತ್ತಿದ್ದಾರೆ’ ಎಂದರು.
‘ಕಾಂಗ್ರೆಸ್ ಆಡಳಿತದಿಂದ ಸಂಪದ್ಬರಿತ ಈ ರಾಜ್ಯ ಹಾಳಾಗುತ್ತಿದೆ. ಎಲ್ಲದರಲ್ಲೂ ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದಾರೆ, ಗುತ್ತಿಗೆದಾರರು ಕಮಿಷನ್ ಬಗ್ಗೆ ಆರೋಪ ಮಾಡುತ್ತಿದ್ದಾರೆ, ರಾಜ್ಯದಲ್ಲಿ ಅಭಿವೃದ್ಧಿ ಕುಂಟಿತವಾಗಿದೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.