ADVERTISEMENT

ದ್ವೇಷ ಭಾಷಣ ವಿಧೇಯಕ ತಡೆಹಿಡಿಯಲು ರಾಜ್ಯಪಾಲರಿಗೆ ಪತ್ರ: ಬಸನಗೌಡ ಪಾಟೀಲ ಯತ್ನಾಳ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 13:05 IST
Last Updated 22 ಡಿಸೆಂಬರ್ 2025, 13:05 IST
ಬಸನಗೌಡ ಪಾಟೀಲ ಯತ್ನಾಳ
ಬಸನಗೌಡ ಪಾಟೀಲ ಯತ್ನಾಳ   

ವಿಜಯಪುರ: ಜನತೆಯ ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಅನ್ನು ಅಂಗೀಕರಿಸಬಾರದು ಎಂದು ಕೋರಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಈಗಾಗಲೇ ಭಾರತೀಯ ನ್ಯಾಯ ಸಂಹಿತೆಯಲ್ಲಿ ದ್ವೇಷ ಭಾಷಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇರುವುದರಿಂದ, ಇದಕ್ಕೆ ಪ್ರತ್ಯೇಕ ವಿಧೇಯಕ ಅವಶ್ಯವಿರುವುದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಈ ವಿಧೇಯಕವನ್ನು ಬಳಸಿ ರಾಜಕೀಯ ವಿರೋಧಿಗಳನ್ನು ದಮನಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ವಿಶೇಷವಾಗಿ ಸರ್ಕಾರದ ವಿರುದ್ಧ ಜನತೆ, ಸಂಘಟನೆಗಳು ಮಾಡುವ ರಚನಾತ್ಮಕ ಟೀಕೆಗಳನ್ನು ಶಿಕ್ಷಾರ್ಹ ಅಪರಾಧವಾಗಿ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನೇ ದುರ್ಬಲಗೊಳಿಸುವ ಹುನ್ನಾರ ನಡೆಸಿದೆ. ಇಂತಹ ಶಾಸನಕ್ಕೆ ಒಪ್ಪಿಗೆ ನೀಡುವುದು ಅಪಾಯಕಾರಿ ಆಗಿದೆ. ಹೀಗಾಗಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ನ್ಯಾಯದ ಹಿತದೃಷ್ಟಿಯಿಂದ ಈ ವಿಧೇಯಕ ತಡೆಹಿಡಿಯುವುದು ಸೂಕ್ತವೆಂದು ಪತ್ರದಲ್ಲಿ ಯತ್ನಾಳ ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.