ADVERTISEMENT

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 14:37 IST
Last Updated 13 ಆಗಸ್ಟ್ 2025, 14:37 IST
   

ವಿಜಯಪುರ: ‘ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹ 5 ಲಕ್ಷ ನಗದು ಪ್ರೋತ್ಸಾಹ ನೀಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಕೊಪ್ಪಳದಲ್ಲಿ ನೀಡಿದ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್‌ ಮೈನುದ್ದೀನ್‌ ಬೀಳಗಿ ಅವರು ನಗರದ ಗಾಂಧಿ ಚೌಕಿ ಪೊಲೀಸ್‌ ಠಾಣೆಯಲ್ಲಿ ಬುಧವಾರ ಯತ್ನಾಳ ವಿರುದ್ಧ ದೂರು ದಾಖಲಿಸಿದ್ದಾರೆ.

ಕೊಪ್ಪಳದಲ್ಲಿ ಇತ್ತೀಚೆಗೆ ನಡೆದ ಗವಿಸಿದ್ದಪ್ಪ ನಾಯಕ ಎಂಬ ಯುವಕನ ಕೊಲೆ ಹಿನ್ನೆಲೆಯಲ್ಲಿ ಶಾಸಕ ಯತ್ನಾಳ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಲು ಹೋದಾಗ ನೀಡಿದ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದ ಕದಡುವಂತಿದೆ. ಅಲ್ಲದೇ, ಕೋಮು ದ್ವೇಷಕ್ಕೆ ಕಾರಣವಾಗಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿರುವ ಯತ್ನಾಳ ವಿರುದ್ಧ ಕಲಂ 299, 193, 353(1)(ಸಿ),353(2) ಬಿ.ಎನ್‌.ಎಸ್‌.2023 ಅಡಿಯಲ್ಲಿ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.