ADVERTISEMENT

‘ಭವಿಷ್ಯಕ್ಕಾಗಿ ಉತ್ತಮ ಜೀವನಶೈಲಿ ಅಗತ್ಯ’ 

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 15:00 IST
Last Updated 25 ಜನವರಿ 2021, 15:00 IST
ವಿಜಯಪುರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ದಿನಾಚರಣೆಯಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎನ್. ಆರ್. ಬಾಗವಾನ ಮಾತನಾಡಿದರು
ವಿಜಯಪುರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ದಿನಾಚರಣೆಯಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎನ್. ಆರ್. ಬಾಗವಾನ ಮಾತನಾಡಿದರು   

ವಿಜಯಪುರ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಉತ್ತಮ ಜೀವನಶೈಲಿ ಹಾಗೂ ಪರಿಶ್ರಮದ ಅವಶ್ಯಕತೆ ಇದೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎನ್. ಆರ್. ಬಾಗವಾನ ಹೇಳಿದರು.

ವಿಜಯಪುರ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ, ಹದಿಹರೆಯದ ಹೆಣ್ಣು ಮಕ್ಕಳ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

10 ರಿಂದ 19 ವರ್ಷ ವಯಸ್ಸಿನ ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಸಂದಿಗ್ದ ಅವಧಿ ಎಂದು ಹೇಳಬಹುದು. ಪೌಷ್ಟಿಕ ಆಹಾರ, ಸಂತಾನೋತ್ಪತ್ತಿ, ಲೈಂಗಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಕುರಿತು ಪರಿಪೂರ್ಣ ಅರಿವಿನ ಕೊರತೆಯಿಂದ ಹಲವು ತೊಂದರೆಗಳಿಗೆ ಒಳಗಾಗುತ್ತಾರೆ ಎಂದರು.

ADVERTISEMENT

ಎಲ್ಲ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹದಿಹರೆಯದವರಿಗೆ ‘ಸ್ನೇಹಾ ಕ್ಲಿನಿಕ್‌’ ತೆರೆಯಲಾಗಿದ್ದು, ಇದರ ಸದಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಸಿದ್ರಾಮ ಶಿಂಧೆ ಮಾತನಾಡಿ, ಇಂದಿನ ಹದಿಹರೆಯದವರು ಪ್ರಯೋಗಶೀಲತೆ ಹಾಗೂ ಮಾಹಿತಿ ಕೊರತೆಯಿಂದ ತಮ್ಮ ಆರೋಗ್ಯ ಮತ್ತು ಬೆಳವಣಿಗೆಗೆ ಸಂಬಂಧ ಹಲವು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಎಂದು ತಿಳಿಸಿದರು.

ಆಡಳಿತಾಧಿಕಾರಿ ರಾಜಕುಮಾರ ರುದ್ರಪ್ಪನವರ ಮಾತನಾಡಿ, ಚಿಕ್ಕ ಮಕ್ಕಳಲ್ಲಿ ಹಾಗೂ ಹದಿಹರೆಯದವರಲ್ಲಿ ಆರೋಗ್ಯಕರ ಹವ್ಯಾಸಗಳನ್ನು ಬೆಳಸಿಕೊಳ್ಳಲು ಉತ್ತೇಜನ ನೀಡಬೇಕು. ಆರೋಗ್ಯಕರ ಜೀವನ ನಮ್ಮದಾಗಬೇಕಾದರೆ ಆರೋಗ್ಯಕರ ಹವ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಯುವಕ, ಯುವತಿಯರು, ಆಶಾಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಮಂಜು ನಾಯ್ಕ ಸ್ವಾಗತಿಸಿದರು. ರಮೇಶ ಹಳ್ಳದ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.