ADVERTISEMENT

ವಿಜಯಪುರ ಜಿಲ್ಲೆಯಾದ್ಯಂತ ಬಿರುಸಿನ ಮಳೆ: ತಗ್ಗು ಪ್ರದೇಶಗಳು ಜಲಾವೃತ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 4:37 IST
Last Updated 2 ಆಗಸ್ಟ್ 2022, 4:37 IST
ಮಳೆಯಿಂದಾಗಿ ಜನವಸತಿ ಪ್ರದೇಶದಲ್ಲಿ ನೀರು ನಿಂತಿರುವುದು
ಮಳೆಯಿಂದಾಗಿ ಜನವಸತಿ ಪ್ರದೇಶದಲ್ಲಿ ನೀರು ನಿಂತಿರುವುದು    

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದ ಗುಡುಗು, ಸಿಡಿಲಿನೊಂದಿಗೆ ಬಿಟ್ಟು ಬಿಡದೆ ಬಿರುಸಿನ ಮಳೆಯಾಗುತ್ತಿದೆ.
ಚರಂಡಿಗಳು ಉಕ್ಕಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜನ, ವಾಹನ ಸಂಚಾರಕ್ಕೆ ಅಡಚಣೆ ಆಗಿದೆ.

ಕರಿ ಮೋಡಗಳು ದಟ್ಟೈಸಿದ್ದು, ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬಿಸಿಲನಾಡು ವಿಜಯಪುರದಲ್ಲಿ ಮಲೆನಾಡಿನ‌ ವಾತಾವರಣ ಸೃಷ್ಟಿಯಾಗಿದೆ.

ಶಾಲೆ, ಕಾಲೇಜು, ಕಚೇರಿಗೆ ತೆರಳಲು ಮಕ್ಕಳು, ಶಿಕ್ಷಕರು, ನೌಕರರು ಪರದಾಡಿದರು.

ADVERTISEMENT

ಪಂಚಮಿ ಹಬ್ಬದ ಪ್ರಯುಕ್ತ ನಾಗರಕಟ್ಟೆಗೆ ಹಾಲೆರೆದು ಪೂಜೆ ಸಲ್ಲಿಸಲು ಮಹಿಳೆಯರು ತೆರಳಲಾಗದಷ್ಟು ಮಳೆ ಸುರಿಯುತ್ತಿದೆ. ಹೀಗಾಗಿ ಜನರು ಮನೆಯಲ್ಲೇ ನಾಗರ ಪಂಚಮಿ ಆಚರಿಸುತ್ತಿದ್ದಾರೆ. ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗಿದೆ.
ಒಂದು ವಾರದಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಬೆಳೆಗೆ ಹಾನಿಯಾಗುವ ಆತಂಕ ಎದುರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.