ADVERTISEMENT

ತಿಕೋಟಾ: ಮೈದುಂಬಿದ ಹಳ್ಳ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 12:25 IST
Last Updated 24 ಜೂನ್ 2019, 12:25 IST
ತಿಕೋಟಾದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಸಂಗಮನಾಥ ಹಳ್ಳ ತುಂಬಿ ಹರಿಯುತ್ತಿರುವುದು
ತಿಕೋಟಾದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಸಂಗಮನಾಥ ಹಳ್ಳ ತುಂಬಿ ಹರಿಯುತ್ತಿರುವುದು   

ತಿಕೋಟಾ: ತಾಲ್ಲೂಕಿನಲ್ಲಿ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳ ತುಂಬಿ ಹರಿಯುತ್ತಿದೆ.

ಸತತ 2–3 ವರ್ಷಗಳಿಂದ ಬರಗಾಲದಿಂದಾಗಿ ಹಳ್ಳ ಬತ್ತಿಹೋಗಿತ್ತು. ಆದರೆ, ಭಾನುವಾರ ರಾತ್ರಿ ಸುರಿದ ಮಳೆಗೆ ಮೈದುಂಬಿ ಹರಿಯುತ್ತಿದೆ.

ಸೋಮವಾರ ಸಂಗಮನಾಥ ದೇವರ ವಾರದ ರುದ್ರಾಭಿಷೇಕ ಸಮಯ. ಮಳೆಯಿಂದಾಗಿ ಗರ್ಭಗುಡಿಯಲ್ಲಿ ನೀರು ನುಗ್ಗಿದ್ದು, ಮಳೆಯಲ್ಲೇ ಅರ್ಚಕರು ಪೂಜೆ ಸಲ್ಲಿಸಿದರು. ಪೂಜಾ ಕಾರ್ಯಕ್ರಮ, ಮಂತ್ರ ಪಠಣವನ್ನು ದೇವಸ್ಥಾನದ ಹೊರಗಡೆ ನಡೆಸಿದರು. ದೇವಸ್ಥಾನದ ಹೊರಗಡೆ ಇಟ್ಟಿದ್ದ ದೇವರ ಪಲ್ಲಕ್ಕಿ ಹಳ್ಳದಲ್ಲಿ ಹರಿದು ಹೋಗಿದೆ.

ADVERTISEMENT

ರೈತರಲ್ಲಿ ಸಂತಸ: ಭಾರಿ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ದ್ರಾಕ್ಷಿ ಬೆಳೆಗಾರರ ಪಾಲಿಗೆ ಮಳೆ ವರವಾಗಿದೆ. ರೈತರು ದ್ರಾಕ್ಷಿ ಕಠಾವು ಪ್ರಾರಂಭಿಸಿದ್ದಾರೆ.

ಕಳ್ಳಕವಟಗಿ, ಘೋಣಸಗಿ, ಬಾಬಾನಗರ, ತಿಕೋಟಾ, ಬಿಜ್ಜರಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ ಸೇರಿದಂತೆ ಅನೇಕ ಕಡೆ ಉತ್ತಮ ಮಳೆಯಾಗಿದೆ. ಹಳ್ಳ– ಕೊಳ್ಳಗಳು ತುಂಬು ಹರಿಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.