ವಿಜಯಪುರ: ನಗರದಲ್ಲಿ ಶುಕ್ರವಾರ ರಾತ್ರಿ ಗುಡುಗು, ಸಿಡಿಲಿನೊಂದಿಗೆ ಸುರಿದ ಭಾರೀ ಮಳೆಗೆ ಇಡೀ ನಗರ ಸ್ತಬ್ಧವಾಯಿತು. ಜನಜೀವನ ಅಸ್ತವ್ಯಸ್ತವಾಯಿತು.
ಎರಡು ತಾಸಿಗೂ ಅಧಿಕ ಹೊತ್ತು ಬಿಡದೇ ಸುರಿದ ಮಳೆಯಿಂದ ನಗರದ ಬಹುತೇಕ ರಸ್ತೆಗಳು ಹೊಳೆಯಂತಾಗಿದ್ದವು. ತಗ್ಗು ಪ್ರದೇಶ ಜಲಾವೃತವಾಗಿ, ಮನೆಗಳಿಗೆ ನೀರು ನುಗ್ಗಿ ಆವಾಂತರ ಸೃಷ್ಟಿಸಿತು. ಜನ–ವಾಹನ ಸಂಚಾರಕ್ಕೆ ಅಡಚಣೆಯಾಯಿತು. ವರಮಹಾಲಕ್ಷ್ಮಿ ಹಬ್ಬದ ಖುಷಿಯಲ್ಲಿದ್ದ ವಿಜಯಪುರದ ಜನ ಭಾರೀ ಮಳೆಗೆ ಬಿಚ್ಚಿಬಿದ್ದರು.
ಬಸವನ ಬಾಗೇವಾಡಿ, ತಾಳಿಕೋಟೆ, ನಾಲತವಾಡ, ಸಿಂದಗಿ ಸೇರಿ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲಿನೊಂದಿಗೆ ಬಿರುಸಿನ ಮಳೆಯಾಗಿದ್ದು, ಹಳ್ಳ–ಕೊಳ್ಳಗಳು ತುಂಬಿ ಹರಿದ್ದಿದ್ದು, ನದಿಗಳಲ್ಲಿ ಪ್ರವಾಹ ತಲೆದೋರಿದೆ. ಸಾವಿರಾರು ಎಕರೆ ಹೊಲಗಳು ಜಲಾವೃತವಾಗಿದ್ದು, ಬೆಳೆಗಳು ಹಾನಿಗೊಳಗಾಗುವ ಆತಂಕ ಎದುರಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.