ADVERTISEMENT

ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 10 ಮೇ 2019, 13:41 IST
Last Updated 10 ಮೇ 2019, 13:41 IST
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಪಾಲ್ಗೊಂಡಿದ್ದ ವನಿತೆಯರು
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಪಾಲ್ಗೊಂಡಿದ್ದ ವನಿತೆಯರು   

ವಿಜಯಪುರ:ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಪೂಜೆ ಸಲ್ಲಿಸಿದರು.

ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಎಚ್.ಬಿ., ಸಮಾಜದ ಮುಖಂಡರಾದ ಸುರೇಶ ದೇಸಾಯಿ, ಲಕ್ಷ್ಮೀ ದೇಸಾಯಿ, ಅಡಿವೆಪ್ಪ ಸಾಲಗಲ್ಲ ಉಪಸ್ಥಿತರಿದ್ದರು.

ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್:

ADVERTISEMENT

ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ವಿಜಯಪುರದ ಸಂಗನಬಸವ ಮಹಾ ಸ್ವಾಮೀಜಿ ಪಾಲಿಟೆಕ್ನಿಕ್‌ನಲ್ಲಿ ಶುಕ್ರವಾರ ಆಚರಿಸಲಾಯಿತು.

ಇದೇ ಸಂದರ್ಭ ಹೇಮರಡ್ಡಿ ಮಲ್ಲಮ್ಮ ಜೀವನದ ಕುರಿತು ಉಪನ್ಯಾಸ ನಡೆಯಿತು. ಶ್ರೀಶೈಲದ ಮಲ್ಲಿಕಾರ್ಜುನನ ಧ್ಯಾನದಿಂದಲೇ ಮುಕ್ತಿ ಪಡೆದಾಕೆ ಎಂದು ಬಣ್ಣಿಸಲಾಯಿತು.

ವಿದ್ಯಾಲಯದ ಎಲ್ಲ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿ ಸಮೂಹ ಭಾಗಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.