ADVERTISEMENT

ವಿದ್ಯಾರ್ಥಿಗಳಿಗೆ ಕೌಶಲ ಅಗತ್ಯ: ಕುಲಪತಿ ಪ್ರೊ.ಸಬಿಹಾ

​ಪ್ರಜಾವಾಣಿ ವಾರ್ತೆ
Published 3 ಮೇ 2019, 14:12 IST
Last Updated 3 ಮೇ 2019, 14:12 IST
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ನಡೆದ ಇತಿಹಾಸ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಪ್ರಾಚೀನ ವಸ್ತುಗಳ ಸಂಗ್ರಹ ವೀಕ್ಷಿಸಲಾಯಿತು
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ನಡೆದ ಇತಿಹಾಸ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಪ್ರಾಚೀನ ವಸ್ತುಗಳ ಸಂಗ್ರಹ ವೀಕ್ಷಿಸಲಾಯಿತು   

ವಿಜಯಪುರ: ‘ವಿದ್ಯಾರ್ಥಿನಿಯರೆಲ್ಲರೂ ಕನಸುಗಾರರಾಗಿ, ಕಂಡಂತಹಕನಸುಗಳನ್ನು ಸಾಕಾರಗೊಳಿಸುವಲ್ಲಿ ದಿಟ್ಟ ಹೆಜ್ಜೆಯನ್ನಿಡಲು ಇಂದಿನಿಂದಲೇ ಸನ್ನದ್ಧರಾಗಬೇಕು’ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಬಿಹಾ ಸಲಹೆ ನೀಡಿದರು.

ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಇತಿಹಾಸ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ ಇಂದಿನ ಮಕ್ಕಳಲ್ಲಿ ನವೀನ ಕೌಶಲಗಳು ಮನೆ ಮಾಡಬೇಕು’ ಎಂದರು.

ಸಮಾಜ ವಿಜ್ಞಾನ ನಿಕಾಯದ ಡೀನ್‌ ಪ್ರೊ.ಓಂಕಾರ ಕಾಕಡೆ, ನಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ನವೀನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು. ಕಲಿಕೆಯ ಮಟ್ಟ ಹೆಚ್ಚಾದಂತೆ ನಮ್ಮ ಅಭಿವೃದ್ಧಿಯು ಹೆಚ್ಚುತ್ತದೆ ಎಂದು ತಿಳಿಸಿದರು.

ADVERTISEMENT

ಇತಿಹಾಸ ವಿಭಾಗದ ಪ್ರಾಧ್ಯಾಪಕರು, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಇದ್ದರು. ಇತಿಹಾಸ ವಿಭಾಗದ ವಿದ್ಯಾರ್ಥಿನಿಯರು ಸ್ವಾಗತ ಗೀತೆಹಾಡಿದರು. ಉಪನ್ಯಾಸಕ ಡಾ.ಆನಂದ ಕುಲಕರ್ಣಿ ನಿರೂಪಿಸಿದರು. ಉಪನ್ಯಾಸಕ ಡಾ.ಎಂ.ಎಸ್.ಮುಜಾವರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.