
ವಿಜಯಪುರ: ಎಚ್‌ಐವಿ ಪೀಡಿತರಿಗೆ ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ವಸತಿ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಜಿಲ್ಲಾ ಏಡ್ಸ್ ರೋಗ ನಿಯಂತ್ರಣ ಘಟಕದ ವೈದ್ಯಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ಹೇಳಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆ, ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣ ಘಟಕದ ಸಹಯೋಗದಲ್ಲಿ ಗುರುವಾರ ಆಯೋಜಿಸಲಾಗಿದ್ದ ಏಡ್ಸ್ ರೋಗ ನಿಯಂತ್ರಣ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಎಚ್‌ಐವಿ ಸೋಂಕಿತರ ಅನೂಕೂಲಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೋಂಡಿದ್ದು, ಎಚ್‌ಐವಿ ಸೋಂಕಿತರಿಗೆ ಎಆರ್‌ಟಿ ಮಾತ್ರೆಗಳು ಸುಲಭವಾಗಿ ದೊರೆಯುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು.
ನಿವೇಶನ ರಹಿತ ಎಚ್‌ಐವಿ ಪೀಡಿತರಿಗೆ ಸರ್ಕಾರದ ವಿವಿಧ ಯೋಜನೆಯಡಿಯಲ್ಲಿ ವಸತಿ ಕಲ್ಪಿಸುವಂತೆ ಜಿಲ್ಲಾ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ ಮತ್ತು ಪಡಿತರ ಚೀಟಿ ಮಾಡಿಸುವ ಕುರಿತು ಚರ್ಚೆ ಮಾಡಲಾಗಿದೆ ಎಂದರು.
ಆಪ್ತ ಸಮಾಲೋಚಕ ರವಿ ಕಿತ್ತೂರ ಮಾತನಾಡಿ, ಎಚ್‌ಐವಿ ಸೋಂಕಿತರ ಮರಣ ಪ್ರಮಾಣ ಕಡಿಮೆಯಾಗಿದೆ. ಇದಕ್ಕೆ ಕಾರಣ ಸರ್ಕಾರ ಮಾತ್ರವಲ್ಲ ಹಲವಾರು ಅನೌಪಚಾರಿಕ ಶಿಕ್ಷಣ ಸಂಸ್ಥೆಯಂತಹ ಮಹೋನ್ನತ ಸಂಸ್ಥೆಗಳುಈ ಸೋಂಕನ್ನು ಹೊಡೆದೊಡಿಸಲು ಎಲ್ಲರೂ ಬದ್ಧರಾಗೋಣ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಫಾ. ಕೆವಿನ್ ಸಿಕ್ವೇರಾ ಮಾತನಾಡಿ ಸೋಂಕಿತರು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದರು.
ಸಿಸ್ಟರ್ ಮರಿಯಮ, ರಾಜಶ್ರೀ ನಾಟಿಕಾರ, ಶೃತಿ ನೀಡೋಣಿ, ರೇಷ್ಮಾ ಕಟ್ಟಿಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.