ADVERTISEMENT

ಹೊರ್ತಿ– ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ: ಪರಿಸರ ಇಲಾಖೆಗೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 11:37 IST
Last Updated 30 ಜುಲೈ 2022, 11:37 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ವಿಜಯಪುರ: ವಿಜಯಪುರ ಹಾಗೂ ಇಂಡಿ ತಾಲ್ಲೂಕಿನ ರೈತರಿಗೆ ವರದಾನವಾಗಲಿರುವ ಮಹತ್ವಾಕಾಂಕ್ಷೆಯ ಹೊರ್ತಿ– ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಪರಿಸರ ತಜ್ಞರ ಸಮಿತಿ ನಿರಪೇಕ್ಷಣಾ ಪತ್ರ ನೀಡಲು ಪರಿಸರ ಇಲಾಖೆಗೆ ಶಿಫಾರಸ್ಸು ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಯೋಜನೆಯಿಂದ ಇಂಡಿ ಮತ್ತು ವಿಜಯಪುರ ತಾಲ್ಲೂಕಿನ ಸುಮಾರು 56 ಹಳ್ಳಿಗಳ 49,730 ಹೆಕ್ಟೆರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದ್ದು, ಮೊದಲನೇ ಹಂತದಲ್ಲಿ ಇಂಡಿ ತಾಲ್ಲೂಕಿನ 28 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜಿಸಲಾಗಿದೆ ಎಂದು ಕಾರಜೋಳರು ಹೇಳಿದ್ದಾರೆ.

ಯೋಜನೆ ಅನುಷ್ಠಾನಕ್ಕಾಗಿ ಪರಿಸರ ಇಲಾಖೆಯ ನಿರಪೇಕ್ಷಣಾ ಪತ್ರ ಪಡೆದುಕೊಳ್ಳಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಮಟ್ಟದ ಪರಿಸರ ತಜ್ಞರ ಸಮಿತಿಯಲ್ಲಿ ಸವಿಸ್ತಾರವಾಗಿ ಚರ್ಚಿಸಿದ ನಂತರ ಪರಿಸರ ತಜ್ಞರ ಸಮಿತಿಯು ಪರಿಸರ ತೀರುವಳಿ ನೀಡಲು ಶಿಫಾರಸ್ಸು ಮಾಡಿರುವುದು ಸಂತೋಷ ಮೂಡಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.