ADVERTISEMENT

ವಿಜಯಪುರ | ಒತ್ತಡ ನಿವಾರಣೆ, ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ: ಜಿಲ್ಲಾಧಿಕಾರಿ

ವಸತಿ ನಿಲಯ ನಿರ್ವಹಣೆಗೆ ಹಾಸ್ಟೆಲ್ ಮೆಂಟರ್-ವಾರ್ಡನ್‍ಗಳಿಗೆ ಮಾರ್ಗದರ್ಶನ ಸಭೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 4:24 IST
Last Updated 11 ಅಕ್ಟೋಬರ್ 2025, 4:24 IST
<div class="paragraphs"><p>ವಿಜಯಪುರ ನಗರದಲ್ಲಿ ಶುಕ್ರವಾರ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ಗಳಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯನ್ನು ಜಿಲ್ಲಾ ಪಂಚಾಯಿತಿ</p></div>

ವಿಜಯಪುರ ನಗರದಲ್ಲಿ ಶುಕ್ರವಾರ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ಗಳಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯನ್ನು ಜಿಲ್ಲಾ ಪಂಚಾಯಿತಿ

   

ವಿಜಯಪುರ: ಜಿಲ್ಲೆಯಲ್ಲಿರುವ ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಪರೀಕ್ಷಾ ಒತ್ತಡವನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ವಸತಿ ನಿಲಯಗಳ ವಾರ್ಡನ್‍ಗಳು ಹಾಗೂ ಹಾಸ್ಟೆಲ್ ಮೆಂಟರ್‌ಗಳು  ಮಕ್ಕಳಿಗೆ ಮುಕ್ತವಾದ ವಾತಾವರಣ ಕಲ್ಪಿಸಿ, ಮಕ್ಕಳೊಂದಿಗೆ ಬೆರೆತು, ಸಮಸ್ಯೆಗಳನ್ನು ಆಲಿಸಿ-ಚರ್ಚಿಸಿ, ಪರಿಹರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿದರು.  

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ಗಳಿಗೆ ವಸತಿ ನಿಲಯಗಳ ನಿರ್ವಹಣೆಯ ಕುರಿತು ಮಾರ್ಗದರ್ಶಿ ಸಭೆ ಹಾಗೂ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳ ಸುರಕ್ಷಾ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ  ಅವರು ಮಾತನಾಡಿದರು. 

ADVERTISEMENT

ಅಧಿಕಾರಿಗಳು  ತಮ್ಮ ಆಸಕ್ತಿಯ ವಿಷಯಗಳ ಕುರಿತು ಮಕ್ಕಳಿಗೆ ಬೋಧನೆ ಮಾಡಬೇಕು.  ವಿಚಾರಗಳು ತಮ್ಮಲ್ಲಿರುವ ಅನುಭವ ಜ್ಞಾನವನ್ನು ಹಂಚಿಕೊಳ್ಳಬೇಕು ಎಂದು ಹೇಳಿದರು. 

ವಸತಿ ನಿಲಯಗಳಲ್ಲಿ ಅವಶ್ಯಕವಿರುವ ಎಲ್ಲ ಅಗತ್ಯ ಮೂಲ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಬೇಕು. ವಾರಕ್ಕೊಮ್ಮೆ ತಜ್ಞ ವೈದ್ಯರನ್ನು ಹಾಸ್ಟೆಲ್‍ಗೆ ಆಹ್ವಾನಿಸಿ ತಪಾಸಣೆ ನಡೆಸಬೇಕು. ರಕ್ತಹೀನತೆ ತಪಾಸಣೆ ನಡೆಸಬೇಕು. ಯೋಗ, ವ್ಯಾಯಾಮಗಳಂತಹ ದೈಹಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.  ಸುಸಜ್ಜಿತವಾದ ಗ್ರಂಥಾಲಯ ಇರುವಂತೆ ನೋಡಿಕೊಳ್ಳಬೇಕು. ಕಂಪ್ಯೂಟರ್ ತರಬೇತಿ ಒದಗಿಸುವ ಮೂಲಕ ವಸತಿ ನಿಲಯಗಳ ವಿದ್ಯಾರ್ಥಿಗಳ ಬೆಳವಣಿಗೆ ಹಾಗೂ ಜೀವನ ಮಟ್ಟ ಸುಧಾರಿಸಲು ಪ್ರೇರೇಪಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್‌  ಮಾತನಾಡಿ, ಕುಟುಂಬದಿಂದ ದೂರ ಬಂದು, ಹಾಸ್ಟೆಲ್‍ನಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಬಂದಿರುವ ಮಕ್ಕಳ ಪೋಷಕರಾಗಿ ಹಾಸ್ಟೆಲ್ ವಾರ್ಡನ್‍ಗಳು ಕಾರ್ಯನಿರ್ವಹಿಸಬೇಕು. ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು ಎಂದರು.

ಮಿಷನ್ ವಿಜಯಪುರದಡಿ ವೆಬ್ ಕಾಸ್ಟಿಂಗ್ ಮೂಲಕ ಸಂಜೆ ಕ್ಲಾಸ್‌ಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಂತೆ ನಿಗಾ ವಹಿಸಬೇಕು ಎಂದು ಹೇಳಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಸತಿ ನಿಲಯಗಳ ವಿದ್ಯಾರ್ಥಿಗಳೂ ದುಶ್ಚಟಗಳಿಗೆ ಬಲಿಯಾಗದಂತೆ ತಿಳಿವಳಿಕೆ ಮೂಡಿಸಬೇಕು ಎಂದರು.

ನೂರು ವಿದ್ಯಾರ್ಥಿಗಳು ಸುಧಾರಿಸಿದಾಗ, ಬೆಳವಣಿಗೆ ಹೊಂದಿದಾಗ ನೂರು ಕುಟುಂಬಗಳು ಬೆಳವಣಿಗೆ ಹೊಂದುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮಾಜದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. 

ಡಿ.ಎ.ಮೂಲಿಮನಿ ಉಪನ್ಯಾಸ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ,ಸಮಾಜ ಕಲ್ಯಾಣ ಇಲಾಖೆ ಮಹೇಶ ಪೋತದಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದೀನ್ ಸೌದಾಗರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಡಾ.ನಾಗರಾಜ್, ಹೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ಸಿದ್ದಪ್ಪ ಬಿಂಜಗೇರಿ, ಆಹಾರ ಸುರಕ್ಷತಾ ಅಧಿಕಾರಿ ಬಿರಾದಾರ, ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ  ಉಪಸ್ಥಿತರಿದ್ದರು.

ವಸತಿ ನಿಲಯಗಳಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳನ್ನು ಹಾಸ್ಟೇಲ್ ಮೆಂಟರ್ ಮತ್ತು ವಾರ್ಡನ್ ತಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ  ಮಕ್ಕಳಲ್ಲಿನ ಆತ್ಮವಿಶ್ವಾಸ ಹೆಚ್ಚಿಸಲು ಕ್ರಮ ವಹಿಸಬೇಕು -ಡಾ.ಆನಂದ ಕೆ.ಜಿಲ್ಲಾಧಿಕಾರಿ 
ಡಾ.ಆನಂದ ಕೆ.ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.