ADVERTISEMENT

ನೆರವಿಗೆ ಮನೆಗೆಲಸ ಮಹಿಳೆಯರ ಮನವಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 13:17 IST
Last Updated 25 ಜೂನ್ 2020, 13:17 IST
ಮನೆಗೆಲಸ ಮಾಡುವ ಮಹಿಳೆಯರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಪದಾಧಿಕಾರಿಗಳು ವಿಜಯಪುರ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು
ಮನೆಗೆಲಸ ಮಾಡುವ ಮಹಿಳೆಯರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಪದಾಧಿಕಾರಿಗಳು ವಿಜಯಪುರ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು   

ವಿಜಯಪುರ: ಮನೆಗೆಲಸ ಮಾಡುವ ಮಹಿಳೆಯರ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‍ಎಸ್) ಪದಾಧಿಕಾರಿಗಳು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.

ಕೋವಿಡ್ ಲಾಕ್‌ಡೌನ್‌ ಅವಧಿಯಲ್ಲಿ ಮನೆಗೆಲಸಕ್ಕೆ ಹೋಗಲು ಸಾಧ್ಯವಾಗದೆ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದೇವೆ. ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಮನೆಗಳಲ್ಲಿ ಕೆಲಸಕ್ಕೆ ಬಾರದಂತೆ ತಿಳಿಸಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ನಮಗೆ ಆಹಾರ ಧಾನ್ಯಗಳ ಕಿಟ್‍ ವಿತರಿಸಬೇಕು. ಸಹಾಯಧನ ನೀಡಬೇಕು. ರಿಯಾಯಿತಿ ದರದಲ್ಲಿ ಬಸ್‍ಪಾಸ್ ನೀಡಬೇಕು ಎಂದು ಮನವಿ ಮಾಡಿದರು.

ಎಐಎಂಎಸ್‍ಎಸ್ ಜಿಲ್ಲಾ ಸಹ ಸಂಚಾಲಕಿ ಗೀತಾ ಎಚ್., ಸದಸ್ಯರಾದ ಭಾವನಾ ಕೊಂಡುಗುಳಿ, ಸಲ್ಮಾ ಶಾರಪ್ಯಾದೆ, ರಜಿಯಾ ಶಾರಪ್ಯಾದೆ, ಅತಿಯಾ ಲೋಕಾಪುರ, ಶಾಹಿನ್ ಶೇಖ್, ಯಾಸ್ಮಿನ್ ಪಟಬೆಗಾರ, ಮಮತಾಜ್‌, ರಜಿಯಾ ಇನಾಮದಾರ, ಶಾಹಿನ್ ಮೇಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.