ADVERTISEMENT

ಶೈಕ್ಷಣಿಕ ಬದುಕಿನ ಮುಖ್ಯ ಘಟ್ಟ ಪಿಯುಸಿ

ಎಕ್ಸಲಂಟ್ ಕಾಲೇಜು ಪ್ರಾರಂಭೋತ್ಸವದಲ್ಲಿ ಸಿಪಿಐ ರವೀಂದ್ರ ನಾಯ್ಕೋಡಿ ಅಭಿಮತ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 12:09 IST
Last Updated 4 ಜನವರಿ 2021, 12:09 IST
ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಾರಂಭಿಸಲಾದ ಪ್ರಸಕ್ತ ಸಾಲಿನ ಪಿ. ಯು.ಸಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಾಗಯ್ಯ ಶಾಸ್ತ್ರಿ ಹಿರೇಮಠ ಮತ್ತು ವಿದ್ಯಾರ್ಥಿನಿಯರು ಉದ್ಘಾಟಿಸಿದರು
ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಾರಂಭಿಸಲಾದ ಪ್ರಸಕ್ತ ಸಾಲಿನ ಪಿ. ಯು.ಸಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ನಾಗಯ್ಯ ಶಾಸ್ತ್ರಿ ಹಿರೇಮಠ ಮತ್ತು ವಿದ್ಯಾರ್ಥಿನಿಯರು ಉದ್ಘಾಟಿಸಿದರು   

ವಿಜಯಪುರ: ದ್ವಿತೀಯ ಪಿ.ಯು.ಸಿ ಶೈಕ್ಷಣಿಕ ಬದುಕಿನ ಮುಖ್ಯ ಘಟ್ಟವಾಗಿದ್ದು, ಹಿಂದಿನ ನಷ್ಟವನ್ನು ಮುಂದಿನ ನಾಲ್ಕಾರು ತಿಂಗಳ ಕಲಿಕೆಯಿಂದ ತುಂಬಿಕೊಳ್ಳಬೇಕು. ಉಳಿದಿರುವ ಸಮಯವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕುಎಂದು ಗಾಂಧಿಚೌಕಿ ಸಿಪಿಐ ರವೀಂದ್ರ ನಾಯ್ಕೋಡಿ ಹೇಳಿದರು. ‌

ಇಲ್ಲಿನ ಅಥಣಿ ರಸ್ತೆಯಲ್ಲಿರುವ ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಾರಂಭಿಸಲಾದ ಪ್ರಸಕ್ತ ಸಾಲಿನ ಪಿ. ಯು.ಸಿ. ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್‌ನಿಂದಾಗಿ ಒಂಬತ್ತು ತಿಂಗಳಿನಿಂದ ಶಾಲಾ –ಕಾಲೇಜಗಳು ಮುಚ್ಚಿ ಹೋಗಿದ್ದವು. ಆನ್‍ಲೈನ್ ತರಗತಿಗಳು ಗ್ರಾಮೀಣ ಭಾಗದ ಮಕ್ಕಳಿಗೆ ಸರಿಯಾಗಿ ತಲುಪದೆ ಕಲಿಕೆ ಅಸ್ತವ್ಯವಸ್ಥೆವಾಗಿತ್ತು ಎಂದರು.

ADVERTISEMENT

ಅಮ್ಮನ ಮಡಿಲು ಚಾರಟೇಬಲ್ ಟ್ರಸ್ಟ್ ಹಾಗೂ ಆಕ್ಸಫರ್ಡ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕೊರೊನಾ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ, ಈ ವೈರಸ್‍ನ ಜೊತೆಗೆ ಬದುಕಿ ಎಲ್ಲರೂ ಯಶಸ್ವಿಯಾಗಬೇಕಿದೆ ಎಂದು ಹೇಳಿದರು.

ಕಾಲೇಜು ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರುವುದರಿಂದ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಶೈಕ್ಷಣಿಕ ವರ್ಷವನ್ನು ಪೂರ್ಣಗೊಳಿಸಬೇಕು ಎಂದರು.

ಕೊರೊನಾ ಪ್ರತಿಯೊಬ್ಬರಿಗೂ ಒಂದೊಂದು ರೀತಿಯ ಪಾಠ ಕಲಿಸಿದ್ದು, ಮನೆಯಲ್ಲಿಯ ಹಿರಿಯ ವಯೋಮಾನದವರನ್ನು ಕಾಳಜಿಯಿಂದ ನಾವೆಲ್ಲ ಕಾಣಬೇಕು. ಅದರೊಟ್ಟಿಗೆ ಶಿಕ್ಷಣದಲ್ಲಿ ಉತ್ತಮ ಸಾಧನೆಗೈದು ಪಾಠ ಕಲಿಸಿದ ಗುರುಗಳಿಗೆ, ಪಾಲಕರಿಗೆ ಹಾಗೂ ಸಂಸ್ಥೆಗೆ ಗೌರವ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಎಕ್ಸಲಂಟ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರ್ಮನ್ ಬಸವರಾಜ ಕೌಲಗಿ ಮಾತನಾಡಿ, ಸರ್ಕಾರದ ಕೋವಿಡ್‌ ಮಾರ್ಗದರ್ಶಿ ನಿಯಮಗಳಂತೆ ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಕಾಲೇಜು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಆತಂಕ, ಭಯಪಡದೆ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ನಾಗಯ್ಯ ಶಾಸ್ತ್ರಿ ಹಿರೇಮಠ ಅವರು ಸರಸ್ವತಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಕಾಲೇಜು ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.

ಪ್ರಾಚಾರ್ಯ ಡಿ.ಎಲ್.ಬನಸೋಡೆ, ಶ್ರದ್ಧಾ ಜಾಧವ, ಉಪನ್ಯಾಸಕ ರವಿ ಕಲ್ಲೂರಮಠ, ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕೌಲಗಿ, ಕಾಲೇಜಿನ ಆಡಳಿತಾಧಿಕಾರಿ ಪರಶುರಾಮ ಭಾವಿಕಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.