ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ
ವಿಜಯಪುರ: ಜಿಲ್ಲೆಯಾದ್ಯಂತ ಮೈಕ್ರೋ ಫೈನಾನ್ಸ್‌ಗಳಿಗೆ ಸಂಬಂಧಿಸಿದಂತೆ ಕಿರುಸಾಲ, ಬಡ್ಡಿ ವ್ಯವಹಾರ (ಲೇವಾದೇವಿ) ನಡೆಸುತ್ತಿದ್ದ 104 ವ್ಯಕ್ತಿಗಳ ಮನೆ, ಕಚೇರಿ ಮೇಲೆ ಜಿಲ್ಲಾ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿ ವೇಳೆ 37 ಜನರ ಹತ್ತಿರ ಅನಧಿಕೃತ ಲೇವಾದೇವಿಗೆ ಸಂಬಂಧಿಸಿದ ನಗದು ಹಣ, ಖಾಲಿ ಬಾಂಡ್, ಚೆಕ್, ಕೈಗಡ ಪತ್ರ, ಪಹಣಿ ಪತ್ರಗಳು, ಬ್ಯಾಂಕ್ ಪಾಸ್‌ಬುಕ್‌ಗಳು ಸೇರಿದಂತೆ ಇತರೆ ದಾಖಲಾತಿಗಳು ದೊರೆತಿರುತ್ತವೆ.
‘₹62.29 ಲಕ್ಷ ನಗದು, 55 ಗ್ರಾಂ ಬಂಗಾರದ ಆಭರಣ, 489 ಖಾಲಿ ಬಾಂಡ್, 285 ಖಾಲಿ ಚೆಕ್, 95 ಪಾಸ್‌ಬುಕ್, 26 ಕರಾರು ಪತ್ರಗಳು ಹಾಗೂ 245 ಇತರೆ ದಾಖಲಾತಿಗಳನ್ನು ವಶಕ್ಕೆ ಪಡೆಯಲಾಗಿದೆ’ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
‘ವಶಪಡಿಸಿಕೊಂಡ ದಾಖಲಾತಿಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಿ, ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.