ADVERTISEMENT

ರೆಮ್‌ಡಿಸಿವಿರ್‌ ಅಕ್ರಮ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಮೇ 2021, 17:35 IST
Last Updated 2 ಮೇ 2021, 17:35 IST
ವಿಜಯಪುರ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿರುವ, ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಅನ್ನು ಕಾಳ ಸಂತೆಯಲ್ಲಿ ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದ ಆರೋಪಿಗಳು
ವಿಜಯಪುರ ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿರುವ, ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಅನ್ನು ಕಾಳ ಸಂತೆಯಲ್ಲಿ ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದ ಆರೋಪಿಗಳು   

ವಿಜಯಪುರ: ಕೋವಿಡ್‌ ರೋಗಿಗಳಿಗೆ ನೀಡುವ ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಅನ್ನು ಕಾಳ ಸಂತೆಯಲ್ಲಿ ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಬುರಣಾಪುರ ರಸ್ತೆಯ ಬಸವನಗರದ ಶ್ರೀಧರ ಪಟ್ಟಣಶೆಟ್ಟಿ ಮತ್ತು ದ್ಯಾಬೇರಿಯ ವಿಠಲ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ.

ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ₹ 3,400ಕ್ಕೆ ಖರೀದಿಸಿ ಅದನ್ನು ₹ 26 ಸಾವಿರಕ್ಕೆ ಒಂದರಂತೆ ಮಾರಾಟ ಮಾಡುತ್ತಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.

ADVERTISEMENT

ಆರೋಪಿಗಳ ಬಳಿಯಿಂದ ಎರಡು ರೆಮ್‌ಡಿಸಿವಿರ್‌ ಇಂಜೆಕ್ಷನ್‌ ಹಾಗೂ ಎರಡು ಮೊಬೈಲ್‌ ಫೋನ್‌ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.