ADVERTISEMENT

ತಂಬಾಕು ಉತ್ಪನ್ನ ಅಕ್ರಮ ಮಾರಾಟ: 48 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 16:00 IST
Last Updated 31 ಮಾರ್ಚ್ 2021, 16:00 IST
ವಿಜಯಪುರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ನೇತೃತ್ವದಲ್ಲಿ ಬುಧವಾರ ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಜಾಗೃತಿ ಮೂಡಿಸಿದರು
ವಿಜಯಪುರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ನೇತೃತ್ವದಲ್ಲಿ ಬುಧವಾರ ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಜಾಗೃತಿ ಮೂಡಿಸಿದರು   

ವಿಜಯಪುರ:ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿ ಬುಧವಾರ ಅಕ್ರಮವಾಗಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭಿಸಿ ಟಿಪ್ಪು ಸುಲ್ತಾನ ವೃತ್ತದ ಮಾರ್ಗವಾಗಿ ಗಾಂಧಿ ಚೌಕ್‌ ವೃತ್ತದ ವರೆಗೆ ದಾಳಿ ನಡೆಸಿ, ಈ ಮಾರ್ಗದಲ್ಲಿ ಬರುವಂತಹ ವಿವಿಧ ಪಾನ್ ಶಾಪ್‌ಗಳಿಗೆ ಹಾಗೂ ಶಾಲಾ ಆವರಣದಿಂದ 100 ಅಡಿ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಎಚ್ಚರಿಕೆ ನೀಡಿ, ದಂಡವನ್ನು ವಿಧಿಸಲಾಯಿತು.

ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ,ವ್ಯಾಪಾರಸ್ಥರ ವಿರುದ್ಧ ಒಟ್ಟು 48 ಪ್ರಕರಣ ದಾಖಲಿಸಿ ₹ 3600 ದಂಡ ವಸೂಲಿ ಮಾಡಲಾಯಿತು.

ADVERTISEMENT

ನಗರದ ವಿವಿಧೆಡೆ ಒಟ್ಟು 32 ನಾಮಫಲಕಗಳನ್ನು ಅಳವಡಿಸಲಾಯಿತು ಹಾಗೂ ತಂಬಾಕು ಉತ್ಪನ್ನಗಳ 6 ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.