ADVERTISEMENT

₹ 5,31 ಲಕ್ಷ ಮೌಲ್ಯದ ಅಕ್ರಮ ಮರಳು ವಶ

​ಪ್ರಜಾವಾಣಿ ವಾರ್ತೆ
Published 18 ಮೇ 2021, 12:10 IST
Last Updated 18 ಮೇ 2021, 12:10 IST
ಸಿಂದಗಿ ತಾಲ್ಲೂಕಿನ ದೇವಣಗಾಂವದ ಭೀಮಾನದಿ ತೀರದಲ್ಲಿ ವಶಪಡಿಸಿಕೊಳ್ಳಲಾಗಿರುವ  ಮರಳಿನೊಂದಿಗೆ ಅಧಿಕಾರಿಗಳು
ಸಿಂದಗಿ ತಾಲ್ಲೂಕಿನ ದೇವಣಗಾಂವದ ಭೀಮಾನದಿ ತೀರದಲ್ಲಿ ವಶಪಡಿಸಿಕೊಳ್ಳಲಾಗಿರುವ  ಮರಳಿನೊಂದಿಗೆ ಅಧಿಕಾರಿಗಳು   

ವಿಜಯಪುರ: ಸಿಂದಗಿ ತಾಲ್ಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮ ವ್ಯಾಪ್ತಿಯ ಭೀಮಾನದಿ ತೀರದಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ 629 ಕ್ಯೂಬಿಕ್ ಮೀಟರ್ ಮರಳನ್ನು ವಶ ಪಡಿಸಿಕೊಳ್ಳಲಾಗಿದೆ.

ದೇವಣಗಾಂವ ಗ್ರಾಮದ ಎರಡು ಸ್ಥಳಗಳಲ್ಲಿ 294 ಕ್ಯೂಬಿಕ್ ಮೀಟರ್ ಹಾಗೂ ಶಂಬೇವಾಡ ಗ್ರಾಮದ ಎರಡು ಸ್ಥಳಗಳಲ್ಲಿ 335 ಕ್ಯೂಬಿಕ್ ಮೀಟರ್ ಮರಳನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಅಂದಾಜು ಮೌಲ್ಯ ₹ 5,31,505 ಆಗಿದೆ ಎಂದು ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ತಿಳಿಸಿದ್ದಾರೆ.

ತಹಶೀಲ್ದಾರ್, ಪೊಲೀಸ್‌ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವು ದಾಳಿಯಲ್ಲಿ ಪಾಲ್ಗೊಂಡಿತ್ತು. ‌ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.