ADVERTISEMENT

ಅನಾರೋಗ್ಯ: ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 13:41 IST
Last Updated 11 ಜನವರಿ 2021, 13:41 IST
ಎಂ.ಸಿ.ಮನಗೂಳಿ
ಎಂ.ಸಿ.ಮನಗೂಳಿ   

ವಿಜಯಪುರ: ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಮಾಜಿ ಸಚಿವ, ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ (85) ಅವರನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕರಿಗೆ ಏಕಾಏಕಿ ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಜಯಪುರದಿಂದ ಅಂಬುಲೆನ್ಸ್ ಮೂಲಕ ಕಲಬುರ್ಗಿಗೆ ಸಾಗಿಸಿ, ಅಲ್ಲಿಂದ ಶನಿವಾರ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿದೆ.

‘ಸದ್ಯ ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ’ ಎಂದು ಅವರ ಪುತ್ರ, ಸಿಂದಗಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.