ವಿಜಯಪುರ: ನಕಲಿ ಕ್ರಿಮಿನಾಶಕ ತಯಾರಿಕಾ ಘಟಕದ ಮೇಲೆ ಕೃಷಿ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ₹1,36,98,523 ಮೌಲ್ಯದ ‘ಲೈಫ್ ಅಗ್ರೋ ಕೆಮಿಕಲ್’ ಹೆಸರಿನ ನಕಲಿ ಕ್ರಿಮಿನಾಶಕ ಔಷಧಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಜಯಪುರ ಕೆಐಎಡಿಬಿಯಲ್ಲಿರುವ ಗೋದಾಮೊಂದರ ಮೇಲೆ ದಾಳಿ ನಡೆಸಿ, ಜಿಲ್ಲೆಯ ಕೊಂಡಗೂಳಿ ಗ್ರಾಮದ ವಿದ್ಯಾಸಾಗರ ಮಲ್ಲಾಬಾದಿ (42) ಮತ್ತು ಕಲಬುರ್ಗಿ ಜಿಲ್ಲೆ ಬೊಳನಿ ಗ್ರಾಮದ ಅಮರ ರೆಡ್ಡಿ(19) ಎಂಬುವವರನ್ನು ಬಂಧಿಸಿದ್ದಾರೆ.
ಆರೋಪಿಗಳು ‘ಗೋಲ್ಡನ್ ಡ್ರಾಪ್ ಕ್ರಾಪ್ ಪ್ರೋಟೆಕ್ಷನ್’ ಎನ್ನುವ ಕಂಪನಿಯ ಬೋರ್ಡ್ ಹಾಕಿಕೊಂಡು ಗೋದಾಮಿನಲ್ಲಿ ತಾವೇ ಅನಧಿಕೃತವಾಗಿ ತಯಾರಿಸಿದ ನಕಲಿ ಕ್ರಿಮಿನಾಶಕ ಔಷಧಗಳಿಗೆ ‘ಲೈಫ್ ಅಗ್ರೋ ಕೆಮಿಕಲ್’ ಕಂಪನಿಯ ಲೇಬಲ್‌ಗಳನ್ನು ಅಂಟಿಸಿ, ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜ ಎ.ತಿಪರಡ್ಡಿ, ಸಹಾಯಕ ಕೃಷಿ ನಿರ್ದೇಶಕ ಅಮಗೊಂಡ ಬಿರಾದಾರ, ಸಹಾಯಕ ಕೃಷಿ ನಿರ್ದೇಶಕಿ ರೇಷ್ಮಾ ಸುತಾರ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ವಿಜಯಪುರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.