ADVERTISEMENT

ಸ್ವಾತಂತ್ರ್ಯ ದಿನ: ಸಂಘ, ಸಂಸ್ಥೆ, ದಾನಿಗಳಿಗೆ ಸನ್ಮಾನ–ಸಿಇಒ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 15:23 IST
Last Updated 11 ಆಗಸ್ಟ್ 2021, 15:23 IST
ಗೋವಿಂದ ರೆಡ್ಡಿ
ಗೋವಿಂದ ರೆಡ್ಡಿ   

ವಿಜಯಪುರ: ಕೊರೊನಾ ಸಂದರ್ಭದಲ್ಲಿ ಅನುಪಮ ಸೇವೆಗೈದ ಸಂಘ, ಸಂಸ್ಥೆಗಳು ಹಾಗೂ ದಾನಿಗಳನ್ನು ಗುರುತಿಸಿಸ್ವಾತಂತ್ರ್ಯ ದಿನಾಚರಣೆಯಂದು ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸನ್ಮಾನಿಸುತ್ತಿರುವವರಿಗೆ ಶಾಲು, ಹಣ್ಣು-ಹಂಪಲು ನೀಡದೆ ಸರ್ಕಾರದ ಆದೇಶದಂತೆ ಪುಸ್ತಕ, ಹೂಗುಚ್ಚ, ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕೊರೊನಾ ಸಂದರ್ಭದಲ್ಲಿ ಸಂಘ-ಸಂಸ್ಥೆಗಳು, ದಾನಿಗಳ ಪಾತ್ರ ಬಹಳ ಮುಖ್ಯವಾಗಿದ್ದು, ಅಂಥವರನ್ನು ಹೀಗೆ ಗುರುತಿಸಿ ಪ್ರೋತ್ಸಾಹಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.

ADVERTISEMENT

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ್ ಕಳಸದ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ವಿಜಯಪುರ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಕವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್‌ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.