ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಪ್ರಥಮ ಬಾರಿಗೆ ಆಯೋಜಿಸಲಾಗಿರುವಸ್ವಾತಂತ್ರ್ಯ ದಿನೋತ್ಸವಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಾಮ್ ಮಂಗಳವಾರ ವೀಕ್ಷಿಸಿದರು.
ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಪಟ್ಟಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೆ, ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಸೂಚಿಸಿದರು.
ಕೋವಿಡ್ 19 ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಕೂರಲು ಪರಸ್ಪರ ಅಂತರದಲ್ಲಿ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಶೀಲ್ದಾರ್ ಮೋಹನ್‍ಕುಮಾರಿ, ನಿಂಗಪ್ಪ ಗೋಠೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಲೋಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.