ADVERTISEMENT

ಸಿಎಂ, ಡಿಸಿಎಂ ರಾಜೀನಾಮೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 14:50 IST
Last Updated 6 ಜೂನ್ 2025, 14:50 IST
ಮಲ್ಲಿಕಾರ್ಜುನ ಕಿವಡೆ
ಮಲ್ಲಿಕಾರ್ಜುನ ಕಿವಡೆ   

ಇಂಡಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರದಿಂದ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸದೇ ಸಮಾರಂಭ ಆಯೋಜನೆ ಮಾಡಿದ್ದರಿಂದ ಕಾಲ್ತುಳಿತದಿಂದ 11 ಜನರ ಸಾವಿಗೆ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರ ತಕ್ಷಣ ಈ ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಹಾಗೂ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಆಗ್ರಹಿಸಿದರು.

ಶುಕ್ರವಾರ ಬಿಜೆಪಿ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ದೇವೆಂದ್ರ ಕುಂಬಾರ, ಅನೀಲಗೌಡ ಬಿರಾದಾರ, ಶಾಂತು ಕಂಬಾರ, ಸಂಜು ದಶವಂತ, ರಾಜಶೇಖರ ಯರಗಲ್, ಸೇರಿದಂತೆ ಇನ್ನಿತರರು ಇದ್ದರು.

ADVERTISEMENT
ಕಾಸೂಗೌಡ ಬಿರಾದಾರ  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.