ADVERTISEMENT

ವಿಜಯಪುರ: ಗುಣಮಟ್ಟದ ರಸಗೊಬ್ಬರ ಪೂರೈಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 16:24 IST
Last Updated 6 ಸೆಪ್ಟೆಂಬರ್ 2022, 16:24 IST
ವಿಜಯಪುರ ತಾಲ್ಲೂಕಿನ ಮಧಬಾವಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿ ಬೆಳೆದ ಸೂರ್ಯಕಾಂತಿಯನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಪರಿಶೀಲಿಸಿ, ಫಲಾನುಭವಿಗಳೊಂದಿಗೆ ಚರ್ಚಿಸಿದರು 
ವಿಜಯಪುರ ತಾಲ್ಲೂಕಿನ ಮಧಬಾವಿ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಲ್ಲಿ ಬೆಳೆದ ಸೂರ್ಯಕಾಂತಿಯನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಪರಿಶೀಲಿಸಿ, ಫಲಾನುಭವಿಗಳೊಂದಿಗೆ ಚರ್ಚಿಸಿದರು    

ವಿಜಯಪುರ: ರೈತರಿಗೆ ಸಕಾಲದಲ್ಲಿ ಗುಣಮಟ್ಟದ ರಸಗೊಬ್ಬರ ಪೂರೈಕೆ ಆಗುವಂತೆ ಮತ್ತು ನಿಗದಿತ ದರದಲ್ಲಿ ಮಾರಾಟವಾಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯ್ತಿಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ನಿರ್ದೇಶನ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಕಚೇರಿಯಲ್ಲಿ ಮಂಗಳವಾರ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ನೂತನ ತಾಂತ್ರಿಕತೆಗಳನ್ನು ರೈತರಿಗೆ ಪರಿಚಯಿಸಬೇಕು,ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಸೂಕ್ತ ವ್ಯವಸ್ಥೆ ರೂಪಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ADVERTISEMENT

ಬೆಳೆ ವಿಮೆ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಣಿಯಾಗಲು ಹೆಚ್ಚಿನ ಪ್ರಚಾರ ನೀಡುವಂತೆ ಮತ್ತು ಇತ್ತೀಚಿನ ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತವಾದ ಫಲಾನುಭವಿಗಳಿಗೆ ಕೂಡಲೇ ಬೆಳೆ ವಿಮೆ ಪರಿಹಾರ ಒದಗಿಸಲು ಸೂಚಿಸಿದರು.‌

ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ರೂಪ ಎಲ್. ಅವರು ಜಿಲ್ಲೆಯ ಮಳೆ ಹಾಗೂ ಬೆಳೆ ಪರಿಸ್ಥಿತಿ, ಬೆಳೆ ಹಾನಿ, ಬಿತ್ತನೆ ಬೀಜ ವಿತರಣೆ, ರಸಗೊಬ್ಬರ ಪೂರೈಕೆಯ ಮಾಹಿತಿ ನೀಡಿದರು.

ವಿಜಯಪುರ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಇಲಾಖಾ ಸಹಾಯಧನದಡಿ ಪಡೆದ ಲಘು ನೀರಾವರಿ ಮತ್ತು ಕೃಷಿ ಯಂತ್ರೋಪಕರಣ ಘಟಕಗಳ ಫಲಾನುಭವಿಗಳೊಂದಿಗೆ ಚರ್ಚಿಸಿದರು.‌

ವಿಜಯಪುರ ವಿಭಾಗದ ಉಪ ಕೃಷಿ ನಿರ್ದೇಶಕ ಪ್ರಕಾಶ ಚವ್ಹಾಣ್, ಇಂಡಿ ವಿಭಾಗದ ಉಪ ಕೃಷಿ ನಿರ್ದೇಶಕ ಚಂದ್ರಕಾಂತ ಪವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.