ಇಂಡಿ: ‘ಪಟ್ಟಣದಲ್ಲಿ ಮೇ 29ರಂದು ಬೆಳಿಗ್ಗೆ 10.30ಕ್ಕೆ ಬೃಹತ್ ತಿರಂಗಾ ಯಾತ್ರೆಯು ಸ್ವಾಮೀಜಿಗಳು ಹಾಗೂ ಮಾಜಿ ಸೈನಿಕರ ನೇತೃತ್ವದಲ್ಲಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಜರುಗಲಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶಂಕರಗೌಡ ಪಾಟೀಲ ತಿಳಿಸಿದ್ದಾರೆ.
‘ಪಟ್ಟಣದ ಶಿವಾಜಿ ವೃತ್ತದಿಂದ ಪ್ರಾರಂಭವಾಗಿ ಬಸವೇಶ್ವರ ವೃತ್ತದವರೆಗೆ ಯಾತ್ರೆ ನಡೆಯಲಿದೆ. ಸಂಸದರು, ಹಾಲಿ ಮತ್ತು ಶಾಸಕರು, ಜನಪ್ರತಿನಿಧಿಗಳು ಸೇರಿದಂತೆ ವಿವಿಧ ಸಂಘಟನೆಯವರು ಭಾಗವಹಿಸಲಿದ್ದಾರೆ. ರಾಷ್ಟ್ರರಕ್ಷಣೆ, ಬಲಿಷ್ಠ ಭಾರತ ನಿರ್ಮಾಣ ಹಾಗೂ ದೇಶದ ಸೈನಿಕರಿಗೆ ನೈತಿಕ ಬೆಂಬಲ ಸೂಚಿಸುವ ಉದ್ದೇಶದಿಂದ ಯಾತ್ರೆ ಆಯೋಜಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.