
ಪ್ರಜಾವಾಣಿ ವಾರ್ತೆ
ಸೋಲಾಪುರ: ತಪೋರತ್ನ ಯೋಗಿರಾಜೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳ ಎಂಟನೇ ಪುಣ್ಯಾರಾಧನಾ ಕಾರ್ಯಕ್ರಮದ ಅಂಗವಾಗಿ, ಆರಳಿ ಗ್ರಾಮದಲ್ಲಿ ಮಾನವ ಕಲ್ಯಾಣಕ್ಕಾಗಿ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಪ್ರಾರ್ಥನೆ ನಡೆಸಲಾಯಿತು.
ವೇದಮೂರ್ತಿ ಪರಮೇಶ್ವರ ಶಾಸ್ತ್ರಿಗಳ ಉಪಸ್ಥಿತಿಯಲ್ಲಿ ಆರಳಿ ಗ್ರಾಮದ ಶಿವಶಕ್ತಿ ದೇವಸ್ಥಾನದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಲಾಯಿತು. ಈ ಇಷ್ಟಲಿಂಗ ಪೂಜೆಯಲ್ಲಿ ಗ್ರಾಮದ 251 ಮಹಿಳೆಯರು ಹಾಗೂ ಪುರುಷರು ಭಕ್ತಿಭಾವದಿಂದ ಭಾಗವಹಿಸಿ, ಮಂತ್ರೋಪಚಾರಗಳೊಂದಿಗೆ ಸಾಮೂಹಿಕ ಇಷ್ಟಲಿಂಗ ಪೂಜೆಯನ್ನು ಸಲ್ಲಿಸಿದರು.
ಸಂಸ್ಥೆಯ ಕಾರ್ಯದರ್ಶಿಗಳಾದ ವೇದಮೂರ್ತಿ ಶಾಂತಯ್ಯ ಸ್ವಾಮಿ, ಪ್ರಾಧ್ಯಾಪಕ ಕಲಶೆಟ್ಟಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.