ADVERTISEMENT

ದೇಶದ ಮಹಾನ್ ವ್ಯಕ್ತಿಗಳನ್ನು ಗೌರವಿಸುವುದು ಕರ್ತವ್ಯ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 16:18 IST
Last Updated 1 ಜೂನ್ 2025, 16:18 IST
ವಿಜಯಪುರ ನಗರದ ಎಂ.ಬಿ. ಪಾಟೀಲ ಅವರ ನಿವಾಸದಲ್ಲಿ ಇಂಡಿ ತಾಲ್ಲೂಕು ಪಂಚಮಸಾಲಿ ಸಮಾಜದ ವತಿಯಿಂದ ಭಾನುವಾರ ಸತ್ಕರಿಸಲಾಯಿತು
ವಿಜಯಪುರ ನಗರದ ಎಂ.ಬಿ. ಪಾಟೀಲ ಅವರ ನಿವಾಸದಲ್ಲಿ ಇಂಡಿ ತಾಲ್ಲೂಕು ಪಂಚಮಸಾಲಿ ಸಮಾಜದ ವತಿಯಿಂದ ಭಾನುವಾರ ಸತ್ಕರಿಸಲಾಯಿತು   

ಇಂಡಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಹೀಗಾಗಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮನವರ ಹೆಸರನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಇಡಲು ಆದೇಶಿಸಲಾಗಿದೆ’ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಕೇಂದ್ರ ಬಸ್ ನಿಲ್ದಾಣ ಎಂದು ನಾಮಕರಣ ಮಾಡಿದ ಪ್ರಯುಕ್ತ ವಿಜಯಪುರದ ಅವರ ಸ್ವಗೃಹದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ವಿ.ಎಚ್.ಬಿರಾದಾರ, ಸಂಗಮೇಶ ಬಬಲೇಶ್ವರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸೋಮಶೇಖರ ದೇವರ, ಪ್ರಧಾನ ಕಾರ್ಯದರ್ಶಿ ಶಿವಾನಂದ ಚಾಳಿಕಾರ, ಮುಖಂಡರಾದ ರವಿ ಖಾನಾಪೂರ, ಉಮೇಶ ಬಳಬಟ್ಟಿ, ಶ್ರೀಶೈಲ ಮುಳಜಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.