ವಿಜಯಪುರ: ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಹೋಗಿದ್ದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಯಜ್ಞೋಪವೀತವನ್ನು ಕತ್ತರಿಸಿರುವುದು ಖಂಡನೀಯ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘ ಯುವ ಘಟಕದ ಜಿಲ್ಲಾ ಅಧ್ಯಕ್ಷ ರೋಹನ ಆಪ್ಟೆ ತಿಳಿಸಿದ್ದಾರೆ.
‘ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ನೀಡುವಾಗ ಬ್ರಾಹ್ಮಣ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ನಡೆದುಕೊಂಡಿದ್ದು ಅಮಾನವೀಯ. ಘಟನೆಗೆ ಕಾರಣವಾದ ಸಿಬ್ಬಂದಿಗಳನ್ನು ತಕ್ಷಣ ವಜಾಗೊಳಿಸಿ ಸೂಕ್ತ ತನಿಖೆ ನಡೆಸಬೇಕು’ ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
‘ಬ್ರಾಹ್ಮಣನು ಜನಿವಾರವನ್ನು ಬದಲಿಸುವುದಕ್ಕೂ ಅದರದ್ದೇ ಆದ ನಿಯಮಗಳು ಹಾಗೂ ಸಂದರ್ಭಗಳಿವೆ. ಪರೀಕ್ಷಾ ಸಿಬ್ಬಂದಿಯ ಈ ಕೃತ್ಯ ಬ್ರಾಹ್ಮಣ ಸಮುದಾಯಕ್ಕೆ ನೋವುಂಟು ಮಾಡಿದೆ. ಇದು ಬ್ರಾಹ್ಮಣರ ಸಂವಿಧಾನಬದ್ಧ ಹಕ್ಕನ್ನು ಕಸಿದಂತೆ. ಬ್ರಾಹ್ಮಣರು ಶಾಂತಿಪ್ರಿಯರು, ಎಲ್ಲವು ಸಹಿಸಿಕೊಳ್ಳುತ್ತಾರೆ. ಆದರೆ ಬ್ರಾಹ್ಮಣ ಸಮುದಾಯ ಇನ್ನು ಮುಂದೆ ಯಾವುದೇ ಕಾರಣಕ್ಕೂ ಇಂತಹ ಘಟನೆಗಳನ್ನು ಸಹಿಸುವುದಿಲ್ಲ. ಸರ್ಕಾರ ಹಾಗೂ ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.