ADVERTISEMENT

ಹಳ್ಳಿಗಳಲ್ಲೂ ಜನೌಷಧ ಕೇಂದ್ರ: ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 20:42 IST
Last Updated 20 ನವೆಂಬರ್ 2020, 20:42 IST

ವಿಜಯಪುರ: ‘ಸಹಕಾರ ಸಂಘ, ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 600 ಜನೌಷಧ ಕೇಂದ್ರ ಆರಂಭಿಸಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಇಲ್ಲಿ ತಿಳಿಸಿದರು.

ಶುಕ್ರವಾರ ನಗರದಲ್ಲಿ ನಡೆದ, ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರುಮಾತನಾಡಿದರು.

‘ದೇಶದಲ್ಲೇ ಮೊದಲ ಬಾರಿಗೆ ಗದಗ ಜಿಲ್ಲೆಯ ಕಣಗಿನಹಾಳದಲ್ಲಿ 1905ರಲ್ಲಿ ಸಹಕಾರ ಸಂಘ ಸ್ಥಾಪಿಸಿದ್ದ ಸಿದ್ದನಗೌಡ ಸಣ್ಣರಾಮನಗೌಡ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದಸಹಕಾರ ರಂಗದ 10 ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.