ADVERTISEMENT

ಸಂತೋಷ್ ಪಾಟೀಲ ಆತ್ಮಹತ್ಯೆ ವಿಚಾರದಲ್ಲಿ ಕಾಂಗ್ರೆಸ್ ಒಣ ರಾಜಕಾರಣ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 9:52 IST
Last Updated 16 ಏಪ್ರಿಲ್ 2022, 9:52 IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ   

ವಿಜಯಪುರ:ಸಂತೋಷ್ ಪಾಟೀಲ ಆತ್ಮಹತ್ಯೆಯಲ್ಲಿ ಕಾಂಗ್ರೆಸ್ ಒಣ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜಾತ್ಯತೀತ ಜನತಾ ದಳದಿಂದ ಹಮ್ಮಿಕೊಂಡಿರುವ 'ಜನತಾ ಜಲಧಾರೆ' ಕಾರ್ಯಕ್ರಮಕ್ಕೆ ಆಲಮಟ್ಟಿಯಕೃಷ್ಣಾ ನದಿ ತೀರದಲ್ಲಿ ‌ಗಂಗಾಪೂಜೆ ನೆರವೇರಿಸುವ ಮೂಲಕ ಕುಮಾರಸ್ವಾಮಿ ಹಾಗೂ ಪಕ್ಷದ ಮುಖಂಡರು ಚಾಲನೆ ನೀಡಿದರು.

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಂತೋಷ್ ಪಾಟೀಲ ಆತ್ಮಹತ್ಯೆ ವಿಚಾರವಾಗಿ ಕಾಂಗ್ರೆಸ್ ಒಣ ರಾಜಕೀಯ ಮಾಡುತ್ತಿದೆ. ಕೆ.ಎಸ್‌. ಈಶ್ವರಪ್ಪಅವರನ್ನು ಬಂಧಿಸಲು ಹೋರಾಟ ನಡೆಸಲು ಹೊರಟಿದ್ದು ಹಾಸ್ಯಾಸ್ಪದ ಎಂದಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಕುರುಬ ಸಮಾಜದ ಪೊಲೀಸ್ ಅಧಿಕಾರಿ ಕಲ್ಲಪ್ಪ ಹಂಡಿಭಾಗ ಆತ್ಮಹತ್ಯೆ ಮಾಡಿಕೊಂಡಾಗ ಸಿದ್ದರಾಮಯ್ಯ ರಾಜೀನಾಮೆ ನೀಡಿದರಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಮತೀಯ ಗಲಾಟೆ ನಡೆದಾಗ, ಧರ್ಮಗಳ ನಡುವೆ ಗಲಾಟೆ ನಡೆದಾಗ ಕಾಂಗ್ರೆಸ್‌ನವರು ಸುಮ್ಮನಿದ್ದದ್ದು ಏಕೆ? ಎಂದು ಕೇಳಿದರು.

ಶಾಸಕ ದೇವಾನಂದ ಚವ್ಹಾಣ,ಜೆಡಿಎಸ್ ಬಾಗಲಕೋಟೆ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ಮಾವಿನಮರದ, ವಿಜಯಪುರ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಮುಖಂಡ ಬಿ.ಡಿ.ಪಾಟೀಲ, ಸುನೀತಾ ಚವ್ಹಾಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.