
ಪ್ರಜಾವಾಣಿ ವಾರ್ತೆವಿಜಯಪುರ: ಜಿಲ್ಲೆಯ ಚಡಚಣ ತಾಲ್ಲೂಕಿನ ಹಲಸಂಗಿ ಗ್ರಾಮದಲ್ಲಿ ಸೋಮವಾರ ಸಂಜೆ 4 ಗಂಟೆಗೆ ಇಬ್ಬರು ಮುಸುಕುಧಾರಿಗಳು ಪಿಸ್ತೂಲ್ ತೋರಿಸಿ, ಚಿನ್ನಾಭರಣ ಮಳಿಗೆ ದರೋಡೆ ಮಾಡಿ ಬೈಕಿನಲ್ಲಿ ಪರಾರಿಯಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ದರೋಡೆ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳುವಾದ ಚಿನ್ನಾಭರಣ ಎಷ್ಟು ಎಂಬುದು ಖಚಿತವಾಗಿಲ್ಲ, ಇನ್ನಷ್ಟೇ ತಿಳಿಯಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.