ADVERTISEMENT

ವಿಜಯಪುರ | ಉದ್ಯೋಗಮೇಳ 27ಕ್ಕೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 2:53 IST
Last Updated 15 ಜನವರಿ 2026, 2:53 IST
   

ವಿಜಯಪುರ: ‘ನಗರದ ದರ್ಬಾರ್‌ ಶಾಲೆಯ ಆವರಣದಲ್ಲಿ ಜನವರಿ 27ರಂದು ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಕೌಶಲ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಆನಂದ ಕೆ. ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 

‘ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಮೇಳ ಆಯೋಜಿಸಬೇಕು. ಮೇಳದಲ್ಲಿ ಭಾಗವಹಿಸಲು 130 ಉದ್ಯೋಗದಾತ ಕಂಪನಿಗಳು ಆಗಮಿಸುವ ಸಾಧ್ಯತೆ ಇದೆ’ ಎಂದರು.

ADVERTISEMENT

ಕೌಶಲಾಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ವೇತಾ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ  ಬದ್ರುದ್ದಿನ ಸೌದಾಗರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸಂಪತ್ ಗುಣಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಕೌಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಮಹಾತೇಂಶ ಬಾಗೇವಾಡಿ, ವಿಜಯಪುರ ಜಿಲ್ಲಾ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಎಸ್.ವಿ. ಪಾಟೀಲ, ಸಣ್ಣ ಕೈಗಾರಿಕಾಗಳ ಸಂಘದ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.