ADVERTISEMENT

ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2024, 15:02 IST
Last Updated 14 ಮಾರ್ಚ್ 2024, 15:02 IST
ವಿಜಯಪುರದ ನಾಗಠಾಣ ಮತಕ್ಷೇತ್ರದ ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು
ವಿಜಯಪುರದ ನಾಗಠಾಣ ಮತಕ್ಷೇತ್ರದ ದೇಸು ಗೇಮು ಚವ್ಹಾಣ ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು   

ವಿಜಯಪುರ: ನಾಗಠಾಣ ಮತಕ್ಷೇತ್ರದ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ದೇಸು ಗೇಮು ಚವ್ಹಾಣ ಅವರು ತಮ್ಮ ಬೆಂಬಲಿಗರೊಂದಿಗೆ ಗುರುವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಮರುಸೇರ್ಪಡೆಯಾದರು.

ವಿಜಯಪುರದ ಕುಮಟಗಿ ಎಲ್.ಟಿ., ಆಹೇರಿ, ಮದಬಾವಿ, ಹಡಗಲಿ ಹಾಗೂ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅನೇಕ ಸದಸ್ಯರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪ್ರೊ.ರಾಜು ಆಲಗೂರ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ರಾಜು ಆಲಗೂರ ಮಾತನಾಡಿ, ‘ನಾಗಠಾಣ ಬ್ಲಾಕ್ ಮಾಜಿ ಅಧ್ಯಕ್ಷ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಯಾಗಿದ್ದು ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ’ ಎಂದರು. 

ADVERTISEMENT

ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ದೇಸು ಗೇಮು ಚವ್ಹಾಣ, ‘ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ’ ಎಂದರು.

ರಾಚು ಚವ್ಹಾಣ, ಅಪ್ಪು ಪವಾರ, ದುಂಡು ಜಾಧವ, ಭಾವಸಿಂಗ ಜಾಧವ, ಸಂತೋಷ ಜಾಧವ, ರಾಜು ಜಾಧವ, ದೊಂಡು ದೇನು ಜಾಧವ, ಸುರೇಶ ಚವ್ಹಾಣ, ಸೇವು ನಾಯಕ, ಮಾನು ಕಾರಬಾರಿ, ಹುನ್ನು ಚವ್ಹಾಣ, ಎಂ.ಎಂ. ಮುಲ್ಲಾ (ದ್ಯಾಬೇರಿ), ಪಾಂಡು ರಾಠೋಡ, ಧರ್ಮು ರಾಠೋಡ, ಎಂ.ವೈ. ಹಲಗಣಿ ಮರಳಿ ಕಾಂಗ್ರೆಸ್ ಸೇರ್ಪಡೆಗೊಂಡರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಾಂದಸಾಬ ಗಡಗಲಾವ, ಗಂಗಾಧರ ಸಂಬಣ್ಣಿ, ಮೀರಾಸಾಬ ಮುಲ್ಲಾ, ವಸಂತ ಹೊನಮೊಡೆ, ಹಾಜಿಲಾಲ್‌ ದಳವಾಯಿ, ಕೃಷ್ಣಾ ಲಮಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.