ADVERTISEMENT

ಕೆ-ಸೆಟ್ ಪರೀಕ್ಷೆ ಸೆ.27ಕ್ಕೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:35 IST
Last Updated 24 ಸೆಪ್ಟೆಂಬರ್ 2020, 14:35 IST

ವಿಜಯಪುರ: ಮೈಸೂರು ವಿಶ್ವವಿದ್ಯಾನಿಲಯವುಸೆ.27ಕ್ಕೆ ಆಯೋಜಿಸಿರುವ ಕೆ-ಸೆಟ್ ಪರೀಕ್ಷೆಯುನಗರದ ಒಂಬತ್ತು ಕೇಂದ್ರಗಳಲ್ಲಿ ನಡೆಯಲಿದ್ದು, 6736 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವುನೋಡೆಲ್ ಕೇಂದ್ರವಾಗಿ ಕಾರ್ಯ ನಿರ್ವಹಿಸಲಿದೆ.

ನಗರದ ಸ್ಟೇಷನ್ ರಸ್ತೆಯಲ್ಲಿರುವ ವಿದ್ಯಾವರ್ಧಕ ಸಂಘದ ಕಲಾ, ವಾಣಿಜ್ಯ ಹಾಗೂ ಬಿ.ಸಿ.ಎ ದರಬಾರ್ ಹೈಸ್ಕೂಲ್, ಕಂದಗಲ್ ಹನುಮಂತರಾಯ ರಂಗಮಂದಿರದ ಎದುರುಗಡೆ ಇರುವ ವಿದ್ಯಾವರ್ಧಕ ಸಂಘದ ವಿ.ಬಿ.ದರಬಾರ್‌ ಪದವಿಪೂರ್ವ ಕಾಲೇಜು, ನವಭಾಗನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಾಮಮಂದಿರ ರಸ್ತೆಯಲ್ಲಿರುವ ಬಿ.ಎಲ್.ಡಿ. ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ, ಆಶ್ರಮ ರಸ್ತೆಯಲ್ಲಿರುವ ಶ್ರೀಮತಿ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಬಿ.ಎಲ್.ಡಿ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ, ಬಿ.ಎಲ್.ಡಿ. ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಸೊಲ್ಲಾಪುರ ರಸ್ತೆಯಲ್ಲಿರುವ ಎಂ.ಬಿ.ಎ ಪ್ರೋಗ್ರಾಂ ಬಿ.ಎಲ್.ಡಿ ಎ.ಎಸ್.ಪಾಟೀಲ್ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾವಿಶ್ವವಿದ್ಯಾನಿಲಯ ಸೇರಿದಂತೆ ಒಟ್ಟು ಒಂಬತ್ತು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ADVERTISEMENT

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ಕೆ-ಸೆಟ್ ಪರೀಕ್ಷಾ ಸಂಬಂಧಿ ಸುತ್ತೋಲೆಗಳನ್ನು ನೋಡಬಹುದಾಗಿದೆ. ಒಂಬತ್ತು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ, ಪರೀಕ್ಷಾ ಕೊಠಡಿಗಳನ್ನು ಸಹ ವೆಬ್‍ಸೈಟ್‌ನಲ್ಲಿ ಹಾಕಲಾಗಿದೆ.

ವಿದ್ಯಾರ್ಥಿಗಳು ಕೊವಿಡ್–19 ಮಾರ್ಗಸೂಚನೆಗಳನ್ನು ಪಾಲಿಸಬೇಕು. ಮಾಸ್ಕ್‌ ಧರಿಸಬೇಕು, ಸ್ಯಾನಿಟೈಜರ್, ಗ್ಲೌಜ್‍ಗಳನ್ನು ಬಳಸಬೇಕು. ವಿದ್ಯಾರ್ಥಿಗಳು ಹಾಲ್‍ಟಿಕೆಟ್ ಗುರುತಿನ ಪತ್ರಗಳನ್ನು ಕಡ್ಡಾಯವಾಗಿ ತರುವುದರ ಜೊತೆಗೆ ಪರೀಕ್ಷಾ ಸಮಯಕ್ಕೆ ಸರಿಯಾಗಿ ಕೊಠಡಿಯಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.