ADVERTISEMENT

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಕಾ.ಹು.ಬಿಜಾಪುರ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 16:34 IST
Last Updated 2 ಸೆಪ್ಟೆಂಬರ್ 2022, 16:34 IST
ಕಾ.ಹು.ಬಿಜಾಪುರ
ಕಾ.ಹು.ಬಿಜಾಪುರ   

ನಿಡಗುಂದಿ:ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಜನಪದ ಸಾಹಿತಿ ಗೊಳಸಂಗಿಯ ಕಾಸಿಂಸಾಹೇಬ್ ಹುಸೇನ ಸಾಹೇಬ ಬಿಜಾಪುರ (87) ಶುಕ್ರವಾರ ರಾತ್ರಿ ನಿಧನರಾದರು.

ಕಳೆದ ಕೆಲ ದಿನಗಳಿಂದ ವಯೋ ಸಹಜ ಕಾಯಿಲೆಗಳಿಂದ ಬಳಲಿದ್ದರು.ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.

ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿ ವಿಜೇತರಾಗಿದ್ದ ಅವರು ಬಸವನಬಾಗೇವಾಡಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ತಾಲ್ಲೂಕು ಎರಡನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ADVERTISEMENT

ಗೊಳಸಂಗಿ ಗ್ರಾಮದಲ್ಲಿ ನಾಲ್ಕು ದಶಕದ ಹಿಂದೆ ಶ್ರೀ ಸ್ವಾಮಿ ವಿವೇಕಾನಂದ ವಿದ್ಯಾವರ್ಧಕ ಸಂಘವನ್ನು ಕಟ್ಟಿ ಶ್ರೀ ರಾಮಸ್ವಾಮಿ ಅಪ್ಪಣ್ಣಪ್ಪ ದಳವಾಯಿ ಪ್ರೌಢಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಆಗಿದ್ದರು.

ಮುಸ್ಲಿಂ ಧರ್ಮದಲ್ಲಿ ಹುಟ್ಟಿ ಬೆಳೆದಿದ್ದರೂ ಸಕಲ ಧರ್ಮಿಯರನ್ನು ಉದಾತ್ತ ಭಾವದಿಂದ ಪ್ರೀತಿಸುವ ಹೃದಯ ವೈಶಾಲಿಯಾಗಿದ್ದರು. ಪ್ರಗತಿಪರ ರೈತರಾಗಿಯೂ ಇತರರಿಗೆ ಮಾದರಿಯಾಗಿದ್ದರು.

ಜನಪದ ಸಾಹಿತಿಗಳಾಗಿದ್ದ ಇವರು ಅನೇಕ‌ ಜನಪದ ಪುಸ್ತಕಗಳನ್ನು ರಚಿಸಿದ್ದಾರೆ. ಹಲವಾರು ‌ಜನಪದ ಗೀತೆಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. 1980 ರ ದಶಕದಲ್ಲಿ ಜಿಲ್ಲೆಯ ಸಾಹಿತಿಗಳ ಜತೆಗೂಡಿ ಹಲವಾರು ಸಾಹಿತ್ಯ ಕಾರ್ಯಕ್ರಮ ಗಳನ್ನು ಸಂಘಟಿಸಿದ್ದರು.

ಸೆಪ್ಟೆಂಬರ್‌ 3ರಂದು ಮಧ್ಯಾಹ್ನ 2ಕ್ಕೆ ಗೊಳಸಂಗಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.