ADVERTISEMENT

ಸೋಲಾಪುರ: ಎಸ್‌ಟಿ ಮೀಸಲಾತಿಗಾಗಿ ಕೈಕಾಡಿ ಸಮುದಾಯದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 6:07 IST
Last Updated 29 ಅಕ್ಟೋಬರ್ 2025, 6:07 IST
ಕೈಕಾಡಿ ಸಮುದಾಯವನ್ನು ಎಸ್‌ಟಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿ ಸೋಲಾಪುರದಲ್ಲಿ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು
ಕೈಕಾಡಿ ಸಮುದಾಯವನ್ನು ಎಸ್‌ಟಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿ ಸೋಲಾಪುರದಲ್ಲಿ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು   

ಸೋಲಾಪುರ: ಹೈದರಾಬಾದ್ ಗೆಜೆಟಿಯರ್ ಪ್ರಕಾರ ಕೈಕಾಡಿ ಸಮುದಾಯವನ್ನು ಎಸ್‌ಟಿ ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕೆಂಬ ಪ್ರಮುಖ ಬೇಡಿಕೆ ಈಡೇರಿಕೆಗಾಗಿ ನಗರದಲ್ಲಿ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.

ಛತ್ರಪತಿ ಶಿವಾಜಿ ವೃತ್ತದಿಂದ ತೆರಳಿದ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಮನವಿ ಸಲ್ಲಿಸಿದರು.

‘ರಾಜ್ಯ ಸರ್ಕಾರವು ಸೆ.2ರಂದು ರಾಜ್ಯದ ಮರಾಠಾ ಸಮುದಾಯಕ್ಕೆ ಹೈದರಾಬಾದ್ ಗೆಜೆಟ್ ಪ್ರಕಾರ ಮೀಸಲಾತಿ ನೀಡಿದೆ. ಅದೇ ರೀತಿ ಕೈಕಾಡಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಅಡಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಯುವಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.