
ಕೊಲ್ಹಾರ: ‘ತ್ಯಾಜ್ಯ ಮುಕ್ತ, ಆರೋಗ್ಯಯುತ ಪಟ್ಟಣ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ’ ಎಂದು ಪಟ್ಟಣದ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು ಹೇಳಿದರು.
ಬುಧವಾರ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಸ್ವಚ್ಛೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಪಟ್ಟಣದ ಪ್ರತಿಯೊಂದು ವಾರ್ಡ್ ಸ್ವಚ್ಛ, ಸುಂದರ ಹಾಗೂ ತ್ಯಾಜ್ಯ ಮುಕ್ತವಾಗಿಸುವುದು ಈ ಕಾರ್ಯಕ್ರಮದ ಉದ್ದೇಶ’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಹೇಳಿದರು.
‘ಕಸ ಸುರಿಯುವಂಥ ಸ್ಥಳಗಳನ್ನು ಗುರುತಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು. ಎಲ್ಲೆಂದರೆಲ್ಲಿ ಕಸ ಎಸೆಯುವ ರೂಢಿ ತಪ್ಪಿಸಲಾಗುವುದು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಸದಸ್ಯರು, ಸಿಬ್ಬಂದಿ ಮತ್ತು ಪೌರಕಾರ್ಮಿಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.