
ಬಸವನಬಾಗೇವಾಡಿ: ತಾಲ್ಲೂಕಿನ ಕಣಕಾಲ ಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಸೋಮವಾರ ಕಣಕಾಲ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಕಣಕಾಲ ಗ್ರಾಮದಲ್ಲಿ ಮನೆಗಳಿಗೆ ಸರಿಯಾಗಿ ನೀರು ತಲುಪುತ್ತಿಲ್ಲ. ಅಲ್ಲದೇ ಗ್ರಾಮದಲ್ಲಿ ಮಹಿಳೆಯರಿಗಾಗಿ ಹೈಟೆಕ್ ಶೌಚಾಲಯ ನಿರ್ಮಿಸಬೇಕೆಂದು ಆಗ್ರಹಿಸಿ ಗ್ರಾಮದ ಮಹಿಳೆಯರು ಗ್ರಾ.ಪಂ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಗ್ರಾ.ಪಂಗೆ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಸಮಸ್ಯೆಗಳನ್ನು ಪರಿಹರಿಸಿ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಾ.ಪಂ ಇಒ ಅವರು ಭರವಸೆ ನೀಡಿದ ಬಳಿಕ ಗ್ರಾಮಸ್ಥರು ಪ್ರತಿಭಟನೆ ಹಿಂಪಡೆದರು.
ದೇವರಹಿಪ್ಪರಗಿ ಬಿಜೆಪಿ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಮುತ್ತುರಾಜ ಹಾಲಿಹಾಳ, ಮುಖಂಡರಾದ ಸಾಹೇಬಗೌಡ ನನ್ನೂರ, ಮಲ್ಲು ಗೋನಾಳ, ಜಕ್ಕೂ ವಾಸೇದಾರ, ರಮೇಶ ಮಜ್ಜಗಿ, ಬಸವರಾಜ ಕೋಲಕಾರ, ಮಂಜು ಕಣಕಾಲ, ಶ್ರೀದೇವಿ, ಯಮನವ್ವ ಈಳಗೇರ್, ಮಹಾದೇವಿ ಹುಲ್ಲೂರ, ನೀಲಮ್ಮ ದಿನ್ನಿ, ರಾಚಮ್ಮ ಅಂಗಡಿ, ರಾಧಿಕಾ ಚಟ್ಟೆರ, ಗಿರಿಜಾ ಅಂಗಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.