ADVERTISEMENT

ಸಿಂದಗಿ ಉಪಚುನಾವಣೆ: ಮಧ್ಯಾಹ್ನ 1 ಗಂಟೆವರೆಗೆ ಶೇ 32.49ರಷ್ಟು ಮತದಾನ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2021, 8:06 IST
Last Updated 30 ಅಕ್ಟೋಬರ್ 2021, 8:06 IST
ಸಿಂದಗಿ ಪಟ್ಟಣದ ‘ಸಖಿ’ ಮತಗಟ್ಟೆಯಲ್ಲಿ ಮಹಿಳೆಯರು ಮತ ಚಲಾಯಿಸಿದರು.
ಸಿಂದಗಿ ಪಟ್ಟಣದ ‘ಸಖಿ’ ಮತಗಟ್ಟೆಯಲ್ಲಿ ಮಹಿಳೆಯರು ಮತ ಚಲಾಯಿಸಿದರು.   

ವಿಜಯಪುರ: ರಾಜ್ಯ ರಾಜಕೀಯದಲ್ಲಿ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಸಿಂದಗಿ ವಿಧಾನಸಭಾ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ನಡೆದಿದೆ.

ಬೆಳಿಗ್ಗೆ 7ಕ್ಕೆ ಆರಂಭವಾದ ಮತದಾನ 9ರ ವರೆಗೆ ಶೇ. 8.08 ಬೆಳಿಗ್ಗೆ 11ರ ವರೆಗೆ ಶೇ 26.75 ಹಾಗೂ ಮಧ್ಯಾಹ್ನ 1 ಗಂಟೆವರೆಗೆ ಶೇ 32.49ರಷ್ಟು ಮತದಾನವಾಗಿದೆ.

ವೃದ್ಧರು, ಮಹಿಳೆಯರು ಸೇರಿದಂತೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುವ ದೃಶ್ಯ ಎಲ್ಲೆಡೆ ಕಂಡಿಬರುತ್ತಿದೆ.

ಒಂದೆರಡು ಮತಗಟ್ಟೆಗಳಲ್ಲಿ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದು ಬಿಟ್ಟರೆ ಉಳಿದಂತೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಮಧ್ಯಾಹ್ನದ ಬಳಿಕ ಹೆಚ್ಚಿನ ಮತದಾನವಾಗುವ ನಿರೀಕ್ಷೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರು ಮಲಘಾಣ ದಲ್ಲಿ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ದೇವಣಗಾಂವ ಮತ್ತು ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಗಣಿಹಾರ ಗ್ರಾಮದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT